NEWSಆರೋಗ್ಯನಮ್ಮರಾಜ್ಯರಾಜಕೀಯ

ರಾಜಾಜಿನಗರದ ಇಎಸ್‌ಐಯಿಂದ ಹೃದ್ರೋಗ ವಿಭಾಗದ ತೆರವಿಗೆ ಎಎಪಿ ವಿರೋಧ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಆಗ್ರಹಿಸಿದರು.

ರಾಜಾಜಿನಗರದ ಎಎಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿ.ಟಿ.ನಾಗಣ್ಣ, “2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‌ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕಿತ್ತು.

ಆದರೆ ಪ್ರಚಾರದ ಕೊರತೆಯಿಂದಾಗಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಆ ಗುರಿ ತಲುಪಲು ಇಎಸ್‌ಐಗೆ ಸಾಧ್ಯವಾಗುತ್ತಿಲ್ಲ. ಇದನ್ನೇ ನೆಪ ಮಾಡಕೊಂಡು, ಅಲ್ಲಿರುವ ಜಯದೇವ ಆಸ್ಪತ್ರೆಯ ಹೃದ್ರೋಗ ವಿಭಾಗವನ್ನು ಸ್ಥಳಾಂತರಿಸಲು ಹೊರಟಿರುವುದು ಖಂಡನೀಯ” ಎಂದು ಹೇಳಿದರು.

ಇಎಸ್‌ಐ ಆಸ್ಪತ್ರೆಯ ಸೌಲಭ್ಯಗಳು ಪ್ರಸ್ತುತ ಕಾರ್ಮಿಕರಿಗೆ ಸೀಮಿತವಾಗಿದೆ. ಅಲ್ಲಿನ ಸೌಲಭ್ಯಗಳನ್ನು ಸಾರ್ವಜನಿಕರಿಗೂ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಕುರಿತು ಪ್ರಚಾರ ಮಾಡದಿದ್ದರೆ ಹೇಗೆ ತಾನೇ ರೋಗಿಗಳಿಗೆ ತಿಳಿಯುತ್ತದೆ ಎಂದು ಪ್ರಶ್ನಿಸಿದರು.

ಇನ್ನಾದರೂ ಜನರಿಗೆ ಮಾಹಿತಿ ನೀಡುವ ಕೆಲಸವನ್ನು ಇಎಸ್‌ಐ ಆಸ್ಪತ್ರೆ ಮಾಡಬೇಕು. ಕೋವಿಡ್‌ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗಬೇಕು. ಬದಲಾಗಿ, ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುವುದು ತಪ್ಪಾಗುತ್ತದೆ ಎಂದು ಬಿ.ಟಿ.ನಾಗಣ್ಣ ಹೇಳಿದರು.

ಬುಧವಾರ ಪ್ರತಿಭಟನೆ: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿರುವ ಹೃದ್ರೋಗ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವುದನ್ನು ಖಂಡಿಸಿ ಆಸ್ಪತ್ರೆಯ ಎದುರು ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸೆಪ್ಟೆಂಬರ್‌ 15ರಂದು ನೂರಾರು ಕಾರ್ಯಕರ್ತರೊಂದಿಗೆ ಎಎಪಿಯ ಬೆಂಗಳೂರು ಘಟಕವು ಪ್ರತಿಭಟನೆ ನಡೆಸಿ, ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಲಿದೆ ಎಂದು ಬಿ.ಟಿ.ನಾಗಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಪ್ರಧಾನ ಕಾರ್ಯದರ್ಶಿ ದಿನೇಶ್‌ರವರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ