Please assign a menu to the primary menu location under menu

CrimeNEWSನಮ್ಮಜಿಲ್ಲೆ

ದುಗ್ಗನಹಳ್ಳಿಯ ಚಿಕ್ಕಪುಟ್ಟೇಗೌಡ್ರು ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮಳವಳ್ಳಿ: ಸ್ನೇಹ ಜೀವಿ ಎಲ್ಲರೊಂದಿಗೂ ಸ್ನೇಹಮಹಿಯಾಗಿದ್ದ ಚಿಕ್ಕಪುಟ್ಟೇಗೌಡ (68) ಹೃದಯಾಘಾತದಿಂದ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.

ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕು ದುಗ್ಗನಹಳ್ಳಿ ಗ್ರಾಮದ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿನ ಡೈರಿ ಮಾಜಿ ಅಧ್ಯಕ್ಷ ಆಗಿದ್ದ ಚಿಕ್ಕಪುಟ್ಟೇಗೌಡ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಕ್ಲೀನಿಕ್‌ಗಳಿಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಅವರ ಆರೋಗ್ಯದಲ್ಲಿ ತುಂಬಾ ಏರುಪೇರು ಆಗಿದ್ದರಿಂದ ಜೆಎಸ್‌ಎಸ್‌ ಆಸ್ಪತ್ರೆಗೆ ಕಳೆದ ಶನಿವಾರ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳಿದ್ದಾರೆ.

ಚಿಕ್ಕಪುಟ್ಟೇಗೌಡ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ದುಗ್ಗನಹಳ್ಳಿಯ ಅವರ ಮನೆಯಲ್ಲಿ ಸೋಮವಾರ ಸಂಜೆವರೆಗೂ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಮೃತರ ತೆಂಗಿನ ತೋಟದಲ್ಲಿ ಅಂತಿಮ ಕ್ರಿಯೆ ನೆರವೇರಿಸಲಾಯಿತು.

ಚಿಕ್ಕಪುಟ್ಟೇಗೌಡ ಅವರು ಪತ್ನಿ ವಸಂತ, ಮೂವರು ಪುತ್ರಿಯರು, ಅಳಿಯಂದಿರು ಮತ್ತು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

error: Content is protected !!
LATEST
KSRTC: ಸರಿ ಸಮಾನ ವೇತನಕ್ಕಾಗಿ ಮತ್ತೊಮ್ಮೆ ನಾಲ್ಕೂ ನಿಗಮಗಳ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳ ಒತ್ತಾಯ ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..!