NEWSನಮ್ಮಜಿಲ್ಲೆರಾಜಕೀಯ

ಸಂಸದ ಪ್ರತಾಪ್‌ಸಿಂಹ ವಿರುದ್ಧ ಕಾಂಗ್ರೆಸ್‌ ಸಮಿತಿಯಿಂದ ಜಿಲ್ಲಾಧಿಕಾರಿಗೆ ದೂರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೇವಸ್ಥಾನಗಳ ತೆರವು ವಿಚಾರದಲ್ಲಿ ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಪ್ರತಾಪಸಿಂಹ ವಿರುದ್ಧ ಆರೋಪಿಸಿ ಕ್ರಮಕೈಗೊಳ್ಳುವಂತೆ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್‌ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಇಂದು ದೂರು ಸಲ್ಲಿಸಲಾಯಿತು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್‌ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ದೂರು ನೀಡಿ ಕಾನೂನಾತ್ಮಕವಾಗಿ ಸಂಸದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್,ಕಳಲೆ ಕೇಶವಮೂರ್ತಿ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ವಕ್ತಾರರಾದ .ಲಕ್ಷ್ಮಣ್,ಎಚ್.ಎ.ವೆಂಕಟೇಶ್, ಮಂಜುಳ‌ ಮಾನಸ,ಪ್ರಧಾನ ಕಾರ್ಯದರ್ಶಿಗಳಾದ ಎಂ.ಶಿವಣ್ಣ,ಈಶ್ವರ್ ಚಕ್ಕಡಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷ ಸೋಮಶೇಖರ್ ಇತರರು ಹಾಜರಿದ್ದರು.

ಮೈಸೂರು ಜಿಲ್ಲೆಯ ಹಲವೆಡೆ ದೇವಾಲಯಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್‌ ಸಿಂಹ ಅವರು ಹಿಂದು ದೇವಾಲಯಗಳನ್ನೇ ಜಿಲ್ಲಾಡಳಿತ ತೆರವು ಮಾಡುತ್ತಿದೆ ಎಂದು ಕಿಡಿಕಾರಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ