Please assign a menu to the primary menu location under menu

Breaking NewsNEWS

ರಾಷ್ಟ್ರಧ್ವಜಕ್ಕೆ ಅವಮಾನ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಿರುದ್ಧ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಆ.22ರಂದು ನಿಧನರಾದ ಉತ್ತರಪ್ರದೇಶದ ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜ ಹೊದಿಸಿ ನಡ್ಡಾ ಅವರು ಅಪಮಾನ ಮಾಡಿದ್ದರು.

ಈ ಕುರಿತು ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಝಫರ್‌ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ʻಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನʼ ಎಂದು ದೂರುದಾರರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ಕೆಲವು ಚಿತ್ರಗಳನ್ನು ಸಹ ದೂರಿನೊಂದಿಗೆ ಸಲ್ಲಿಸಿದ್ದಾರೆ. ನ್ಯಾಯಾಲಯವು ಪ್ರಕರಣದ ಬಗ್ಗೆ ಗಮನಹರಿಸಬೇಕಿದ್ದು, ವಿಚಾರಣೆಗೆ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ.

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದೇನು?

* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು

* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು

* ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...