Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಸರ್ಕಾರದ ದ್ವಂದ್ವ ನೀತಿಯಿಂದ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸ: ಎಚ್‌ಡಿಕೆ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಮೈಸೂರು ಜಿಲ್ಲೆಯ 93 ದೇವಾಲಯಗಳ ಧ್ವಂಸಕ್ಕೆ ರಾಜ್ಯ ಬಿಜೆಪಿ ಸರ್ಕಾರದ ದ್ವಂದ್ವ ನೀತಿಯೇ ಕಾರಣ. ಒಂದು ಸರ್ಕಾರಕ್ಕಿಂತ ಜಿಲ್ಲಾಡಳಿತ ದೊಡ್ಡದೇ?

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಒಂದೆಡೆ ದೇಗುಲಗಳ ಧ್ವಂಸ ನಡೆಯುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಮಿತ್ರಸಂಘಟನೆ ಹಿಂದೂ ಜಾಗರಣ ವೇದಿಕೆ ಹಾದಿಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಇದರ ಅರ್ಥವೇನು? ದೇಗುಲಗಳ ಧ್ವಂಸ ಮತ್ತು ಪ್ರತಿಭಟನೆ ಹಿಂದೆ ಬಿಜೆಪಿ ಇದೆ ಎಂಬ ಅನುಮಾನ ಕಾಡುತ್ತಿದೆ.

ಸರಕಾರ ಮನಸ್ಸು ಮಾಡಿದರೆ ತಕ್ಷಣವೇ ದೇಗುಲಗಳ ನೆಲಸಮ ನಿಲ್ಲಿಸಬಹುದು. ಸರಕಾರ ಅದನ್ನು ಮಾಡುತ್ತಿಲ್ಲ. ಹಿಂದುಗಳ ರಕ್ಷಣೆಯ ಪೇಟೆಂಟ್ ಪಡೆದು ರಾಜಕಾರಣ ಮಾಡುವ ಭಾರತೀಯ ಜನತಾ ಪಕ್ಷದ ಸರಕಾರವೇ ರಾಜ್ಯದಲ್ಲಿದೆ.

ಹಾಗಾದರೆ, ದೇವಾಲಯಗಳನ್ನೇಕೆ ನೆಲಸಮ ಮಾಡಲಾಗುತ್ತಿದೆ? ಸರಕಾರವೇ ಇದಕ್ಕೆ ಉತ್ತರ ನೀಡಬೇಕು. ಸರಕಾರಕ್ಕೆ ನಿಜಕ್ಕೂ ದೇಗುಲ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಸುಪ್ರೀಂ ಕೊರ್ಟ್ʼಗೆ ಮೇಲ್ಮನವಿ ಸಲ್ಲಿಸಲಿ. ಎಲ್ಲ ಪಕ್ಷಗಳನ್ನು ಕರೆದು ಚರ್ಚೆ ನಡೆಸಲಿ.

ಅದನ್ನು ಬಿಟ್ಟು ಮಗುವನ್ನೂ ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುವುದು ಬೇಡ. ದೇವಾಲಯಗಳಿಗೆ ರಕ್ಷಣೆ ನೀಡಲು ಸರಕಾರ ಸಂಪೂರ್ಣ ವಿಫಲವಾಗಿದೆ. ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತಿದೆ.

ಜನರ ಗಮನ ಬೇರೆಡೆಗೆ ಸೆಳೆಯಲು ಸರಕಾರವೇ ಈ ನಾಟಕ ಆಡುತ್ತಿದೆಯಾ ಎಂಬ ಸಂಶಯ ಉಂಟಾಗುತ್ತಿದೆ. ಇದೂ ಬಿಜೆಪಿಯ ಕಾರ್ಯಸೂಚಿಯೇ ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ