NEWSನಮ್ಮಜಿಲ್ಲೆಶಿಕ್ಷಣ-

ಎರಡು ದಿನಕ್ಕಿಂತ ಹೆಚ್ಚು ಕೋವಿಡ್ ಗುಣಲಕ್ಷಣ ಕಂಡುಬರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಿಸಿ: ಬಿಬಿಎಂಪಿ ಮುಖ್ಯ ಆಯುಕ್ತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ಎಲ್ಲ ಶಾಲೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ಗುರುತಿಸಿ, 2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕು ಗುಣಲಕ್ಷಣಗಳು ಕಂಡುಬರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಲು ಕ್ರಮವಹಿಸಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಕ್ಕಳ ತಜ್ಞರ ಸಮಿತಿ ಹಾಗೂ ತಾಂತ್ರಿಕ ತಜ್ಞರ ಸಮಿತಿ ಜೊತೆ ಇಂದು ಸಭೆ ನಡೆಯಿತು. ಈ ಸಭೆಯಲ್ಲಿ ನಗರದಲ್ಲಿ ಮಕ್ಕಳಲ್ಲಿ ಕೋವಿಡ್ ಸೋಂಕು ಬಾರದಂತೆ ಯಾವೆಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಟೆಸ್ಟಿಂಗ್ ಯಾವ ರೀತಿ ಮಾಡಬೇಕು, ಮಕ್ಕಳಿಗಾಗಿ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬುವುದು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಅದರಂತೆ ನಗರದ ಎಲ್ಲ ಶಾಲೆಗಳಲ್ಲೂ ನೋಡಲ್ ಅಧಿಕಾರಿಯನ್ನು ಗುರುತಿಸಿ ಆ ಶಾಲಾ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ಕಾರ್ಯನಿರ್ವಹಿಸುವ ವೈದ್ಯಾಧಿಕಾರಿ ಜೊತೆ ಶಾಲೆಯ ನೋಡಲ್ ಅಧಿಕಾರಿಯನ್ನು ಟೈ-ಅಪ್ ಮಾಡಬೇಕು.

ಶಾಲೆಗೆ ಬರುವ ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ದಿನಗಳ ಕಾಲ ಸೋಂಕು ಲಕ್ಷಣ ಕಂಡುಬಂದರೆ ಅಂತಹ ಮಕ್ಕಳನ್ನು ಶಾಲೆಗೆ ಬಾರದಂತೆ ತಿಳಿಸಬೇಕು. ಆ ಬಳಿಕ ಸೋಂಕು ಲಕ್ಷಣವಿರುವ ಮಕ್ಕಳ ಮಾಹಿತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿದರೆ ಅಂತಹ ಮಕ್ಕಳ ಮನೆಗೆ ವೈದ್ಯಾಧಿಕಾರಿ ತಂಡವು ತೆರಳಿ ಪರೀಕ್ಷೆ ಮಾಡಬೇಕು ಎಂದರು.

ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕು ಲಕ್ಷಣ ಕಂಡುಬರುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಆರ್‌ಟಿಪಿಸಿಆರ್ ಕೋವಿಡ್ ಟೆಸ್ಟ್ ಮಾಡುತ್ತಿದ್ದು, ಬಹುತೇಕ ಮಕ್ಕಳಿಗೆ ನೆಗೆಟಿವ್ ಬರುತ್ತಿದೆ.

ಈ ಸಂಬಂಧ 2 ದಿನಕ್ಕಿಂತ ಹೆಚ್ಚು ಸೋಂಕು ಲಕ್ಷಣಗಳಿರುವ ಹಾಗೂ ಇತರೆ ಖಾಯಿಲೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುವ ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡುವ ಸಂಬಂಧ ಪಾಲಿಕೆ ವತಿಯಿಂದ ಎಲ್ಲಾ ಆಸ್ಪತ್ರೆಗಳಿಗೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

ಶಾಲೆಗೆ ಹೋಗುವ ಮಕ್ಕಳ ಜೊತೆ ಸಂಪರ್ಕ ಹೊಂದಿರುವವರಿಗೆ ಲಸಿಕೆ ನೀಡಬೇಕು. ಇದರಿಂದ ಎಲ್ಲರೂ ಸುರಕ್ಷಿತವಾಗಿರಬಹುದಾಗಿರುತ್ತದೆ. ನಗರದಲ್ಲಿ ಮಕ್ಕಳಲ್ಲಿ ಹೆಚ್ಚು ಕೋವಿಡ್ ಸೊಂಕು ಕಂಡುಬರುತ್ತಿಲ್ಲ.

ಈ ಸಂಬಂಧ 0 ರಿಂದ 12 ವರ್ಷದ ಮಕ್ಕಳಿಗೆ ಶೇ. 7.21 ಹಾಗೂ 13 ರಿಂದ 18 ವರ್ಷದ ಮಕ್ಕಳಿಗೆ ಶೇ. 8.21 ಸೋಂಕು ಕಂಡುಬರುತ್ತಿದೆ. ಮಕ್ಕಳಿಗೆ ಈ ಕಾಲದಲ್ಲಿ ಸಾಮಾನ್ಯವಾಗಿ ಜ್ವರ, ನೆಗಡಿ, ಕೆಮ್ಮು ರೀತಿಯ ಲಕ್ಷಣಗಳು ಕಂಡುಬಂದು ಒಂದು ವಾರದೊಳಗಾಗಿ ಗುಣಮುಖರಾಗುತ್ತಾರೆ ಎಂದು ಹೇಳಿದರು.

ತಾಂತ್ರಿಕ ತಜ್ಞರ ಸಮಿತಿ ಜೊತೆ ಸಭೆ: ತಾಂತ್ರಿಕ ತಜ್ಞರ ಸಮಿತಿ ಜೊತೆ ನಡೆದ ಸಭೆಯಲ್ಲಿ ಸೀರೋ ಸಮೀಕ್ಷೆ ಹಾಗೂ ಜಿನೋಮ್ ಸೀಕ್ವೆನ್ಸ್ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂಬಂಧ ಸೆರೋ ಸಮೀಕ್ಷೆ ಮಾಡಿರುವ ಸಂಬಂಧ ಇನ್ನೂ ವಿವರವಾದ ಮಾಹಿತಿ ನೀಡಲು ಸಮಿತಿಯಲ್ಲಿರುವ ತಜ್ಞರು ತಿಳಿಸಿದ್ದು, ವಿವರವಾದ ಮಾಹಿತಿಯನ್ನು ಸಂಗ್ರಹಿಸಿ ವರದಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಮುಖ್ಯ ಆಯುಕ್ತರು ತಿಳಿಸಿದರು.

ಜೀನೋಮ್ ಸೀಕ್ವೆನ್ಸಿಂಗ್ ಹೆಚ್ಚು ಡೆಲ್ಟಾ ತಳಿಗಳನ್ನು ತೋರಿಸಿದೆ. ನಗರದಲ್ಲಿ ಬೇರೆ ಯಾವುದೇ ರೂಪಾಂತರಗಳು ಕಂಡುಬಂದಲ್ಲಿ ಪರೀಕ್ಷಿಸಲು ತಜ್ಞರ ಸಮಿತಿ ಸಲಹೆ ನೀಡಿದೆ. ಸಮಿತಿಯು ಜೀನೋಮ್ ಸೀಕ್ವೆನ್ಸಿಂಗ್ ಮುಂದುವರಿಸಲು ಸೂಚಿಸಿದೆ ಮತ್ತು ಅದರ ಪ್ರಕಾರ, ಬಿಬಿಎಂಪಿ ಮಾದರಿಗಳನ್ನು ಸಂಗ್ರಹಿಸುತ್ತದೆ ಮತ್ತು ನಗರದಲ್ಲಿ ಬೇರೆ ಯಾವುದೇ ರೂಪಾಂತರಗಳು ಕಂಡುಬಂದಿವೆಯೇ ಎಂದು ಪರೀಕ್ಷಿಸಲಾಗುತ್ತದೆ.

ಎರಡು ಬಾರಿ ಲಸಿಕೆ ಪಡೆದವರಿಗೆ ಕೋವಿಡ್ ಸೋಂಕು ಕಂಡುಬಂದವರಿಂದ ಹೆಚ್ಚು ಸ್ಯಾಂಪಲ್ಸ್ ಪಡೆದು ಜಿನೋಮ್ ಸೀಕ್ವೆನ್ಸ್ ಮಾಡಲಾಗುತ್ತದೆ. ಜೀನೋಮ್ ಸೀಕ್ವೆನ್ಸಿಂಗ್ ಅನ್ನು ಅಗತ್ಯವಿರುವ ಎಲ್ಲ ರೀತಿಯಲ್ಲಿ ನಡೆಸಲಾಗುತ್ತದೆ ಮತ್ತು ವರದಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಸಭೆಯಲ್ಲಿ ವಿಶೇಷ ಆಯುಕ್ತ ಡಿ.ರಂದೀಪ್, ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ) ಡಾ. ವಿಜೇಂದ್ರ, ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಡಾ. ನಿರ್ಮಲ ಬುಗ್ಗಿ, ಮಕ್ಕಳ ತಜ್ಞರ ಸಮಿತಿ ಹಾಗೂ ತಾಂತ್ರಿಕ ತಜ್ಞರ ಸದಸ್ಯರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ