Vijayapatha – ವಿಜಯಪಥ
Saturday, November 2, 2024
CrimeNEWSನಮ್ಮಜಿಲ್ಲೆ

ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಬಿಎಸ್‌ಬಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಹೃದಯಾಘಾತದಿಂದ ನಿನ್ನೆ (ಸೆ.15) ನಿಧನರಾದ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅಳುತ್ತಾ, ಅಂತಿಮ ನಮನ ಸಲ್ಲಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದಕ್ಕೂ ಮುನ್ನ ನಿನ್ನೆ ಗೆಳೆಯನ ಸಾವಿನ ಸುದ್ದಿ ಕೇಳಿ, ಮೌನಕ್ಕೆ ಶರಣಾದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜು ಪಾಟೀಲ್ ಅವರ ಸಾವಿಗೆ ಕಂಬನಿ ಮಿಡಿದು, ತಮ್ಮ ಮತ್ತು ಆತನ ಗೆಳೆತನದ ಬಗ್ಗೆ ಫೇಸ್​ಬುಕ್​ನಲ್ಲಿ ಬರೆದುಕೊಂಡರು.

ಸಹೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರು ಇಂದು ನಿಧನರಾಗಿದ್ದು, ನಾನು ತುಂಬಾ ದುಃಖಿತನಾಗಿದ್ದೇನೆ. ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು.

ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜತೆ ಇರುತ್ತಿದ್ದರು. ಅವರ ಅಗಲಿಕೆಯು ನನಗೆ ಅತೀವ ದುಃಖ ತರಿಸಿದ್ದು, ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ.

ಇಂದು ಹುಬ್ಬಳ್ಳಿಯಲ್ಲಿ ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ  ರಾಜು ಪಾಟೀಲ್ ಅವರ ಪಾರ್ಥಿವ  ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನಗಳನ್ನು ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು. 

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ