Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶ

ನಾನು ಯೂಟ್ಯೂಬ್‌ನಿಂದ ತಿಂಗಳಿಗೆ 4 ಲಕ್ಷ ರೂ. ಸಂಪಾದಿಸುತ್ತಿದ್ದೇನೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಯೂಟ್ಯೂಬ್‌ನಿಂದ ನಾನು ತಿಂಗಳಿಗೆ 4 ಲಕ್ಷ ರೂಪಾಯಿ ಸಂಪಾದಿಸ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೋವಿಡ್ ಸಮಯದಲ್ಲಿ ತಮ್ಮ ಸಮಯವನ್ನು ಹೇಗೆ ಬಳಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಪ್ರಗತಿಯನ್ನು ಪರಿಶೀಲಿಸಲು ಹೋದಾಗ, ಹರಿಯಾಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಿತಿನ್ ಗಡ್ಕರಿ ಕೊರೊನಾ ಸಮಯದಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದ್ದಾರೆ.

ಮಹಾಮಾರಿ ಕೊರೊನಾ ಸಮಯದಲ್ಲಿ ಲಾಕ್ಡೌನ್‌ನಿಂದಾಗಿ ಜನರು ಕೆಲಸವಿಲ್ಲದೆ ಮನೆಯಲ್ಲೇ ಕುಳಿತಿದ್ದಾಗ ಅದೆಷ್ಟೂ ಮಂದಿ ತಮ್ಮ ಹೊಸ ಹೊಸ ಐಡಿಯಾಗಳಿಂದ ಯೂಟ್ಯೂಬ್ ಚಾನಲ್ ಕ್ರಿಯೆಟ್ ಮಾಡಿ ಹಣ ಮಾಡಿದ್ದಾರೆ.

ಹೊಸ ಹೊಸ ಪ್ರತಿಭೆಗಳು ಈ ಸಮಯದಲ್ಲಿ ಅನಾವರಣಗೊಂಡಿವೆ. ಅದರಂತೆಯೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೂಡ ಯೂಟ್ಯೂಬ್ ಚಾನಲ್ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಾರೆ.

ಅದನ್ನು ಅವರೆ ಹೇಳಿಕೊಂಡಿದ್ದು, ಕೋವಿಡ್ -19 ಸಮಯದಲ್ಲಿ, ನಾನು ಎರಡು ಕೆಲಸಗಳನ್ನು ಮಾಡಿದ್ದೇನೆ. ನಾನು ಮನೆಯಲ್ಲಿ ಅಡುಗೆ ಮಾಡುತ್ತಿದ್ದೆ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಉಪನ್ಯಾಸ ನೀಡುತ್ತಿದೆ.

ನಾನು ಆನ್‌ಲೈನ್‌ನಲ್ಲಿ ಅನೇಕ ಉಪನ್ಯಾಸಗಳನ್ನು ನೀಡಿದ್ದೇನೆ ಹಾಗೂ ಅದನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸದ್ಯ ಈಗ ಅನೇಕ ಮಂದಿ ಆ ವಿಡಿಯೋಗಳನ್ನು ನೋಡುತ್ತಿದ್ದಾರೆ.

ದೊಡ್ಡ ವೀಕ್ಷಕರ ಬಳಗದಿಂದಾಗಿ, ಯೂಟ್ಯೂಬ್ ಈಗ ನನಗೆ ತಿಂಗಳಿಗೆ 4 ಲಕ್ಷ ರೂಪಾಯಿಗಳನ್ನು ನೀಡುತ್ತಿದೆ ಎಂದು ಗಡ್ಕರಿ ಕೊರೊನಾ ಸಮಯದಲ್ಲಾದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದ್ದಾರೆ.

ನನ್ನ ಮಾವನ ಮನೆ ಕೆಡವಲು ಆದೇಶ ನೀಡಿದ್ದೆ: ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ತನ್ನ ಪತ್ನಿಗೆ ಹೇಳದೆ ತನ್ನ ಮಾವನ ಮನೆಯನ್ನು ಕೆಡವಲು ಆದೇಶ ನೀಡಿದ್ದೆ ಎಂಬ ತನ್ನ ಹಿಂದಿನ ಒಂದು ಘಟನೆಯನ್ನು ನೆನೆಪಿಸಿಕೊಂಡಿದ್ದಾರೆ.

ನಾನು ಹೊಸದಾಗಿ ಮದುವೆಯಾಗಿದ್ದೆ. ನನ್ನ ಮಾವನ ಮನೆ ರಸ್ತೆ ಮಧ್ಯದಲ್ಲಿತ್ತು. ನನ್ನ ಹೆಂಡತಿಗೆ ಹೇಳದೆ, ನಾನು ನನ್ನ ಮಾವನ ಮನೆಯನ್ನು ಕೆಡವಲು ಆದೇಶಿಸಿದ್ದೆ. ಆದ್ರೆ ತನಗೂ ಅಲ್ಲಿ ಮನೆ ಇದೆ ಮತ್ತು ರಸ್ತೆ ನಿರ್ಮಿಸಲು ಅದನ್ನು ನೆಲಸಮ ಮಾಡಬೇಕಾಗಿದೆ ಎಂದು ಅಧಿಕಾರಿಗಳು ನನಗೆ ತಿಳಿಸಿದ್ದ ಮೇಲೆಯೇ ಈ ಸಂಗತಿ ನನಗೆ ತಿಳಿದದ್ದು ಎಂದರು.

ಇನ್ನು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು 95,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಮಾರ್ಚ್ 2023 ರ ವೇಳೆಗೆ ಮುಗಿಯಲಿದೆ. ಬಹುತೇಕ ಕೆಲಸಗಳನ್ನು ಗುತ್ತಿಗೆದಾರರಿಗೆ ಈಗಾಗಲೇ ನೀಡಲಾಗಿದೆ. ಗುರುಗ್ರಾಮದ ಲೋಡ್ಕಿ ಗ್ರಾಮದಲ್ಲಿ ನಡೆಯುತ್ತಿರುವ ಯೋಜನೆಯ ಕೆಲಸದ ಸ್ಥಿತಿಯನ್ನು ಪರಿಶೀಲಿಸಿದ ನಂತರ ಗಡ್ಕರಿ ಮಾಹಿತಿ ನೀಡಿದ್ದಾರೆ.

ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಗುರುಗ್ರಾಮ್ ಲೋಕಸಭಾ ಸದಸ್ಯ ರಾವ್ ಇಂದರ್ಜಿತ್ ಸಿಂಗ್ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ, ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ