ಯುವಕನ ಒನ್ ಸೈಡ್ ಲವ್ : ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಚಾಕು ಇರಿದ
ಬಾಗಲಕೋಟೆ: ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತಳಿಗೆ ಚಾಕು ಇರಿದ ಘಟನೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಬಾಲಕಿ ಪ್ರೀತಿಸಲು ನಿರಾಕರಿಸಿದಳು, ಇದರಿಂದ ಕುಪಿತಗೊಂಡ ಯುವಕ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಚಾಕುವಿನಿಂದ ಇರಿದಿದ್ದರಿಂದ ಅಪ್ರಾಪ್ತೆಯ ಕುತ್ತಿಗೆ ಹಾಗೂ ಕಿವಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಪ್ರಾಪ್ತೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ, 23 ವರ್ಷದ ರವಿ ಅಥಣಿ ಎಂಬ ಯುವಕ ಆಕೆಯನ್ನು ಪ್ರೀತಿಸುತ್ತಿದ್ದ, ಆದರೆ ಅಕೆ ಈತನನ್ನು ಪ್ರೀತಿಸುತ್ತಿರಲಿಲ್ಲ. ಇದು ಒನ್ ಸೈಡ್ ಲವ್ ಆಗಿದೆ.
ಆದರೂ, ಆಕೆಯನ್ನು ಕೆಲ ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ, ಬಾಲಕಿ ಅದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದು, ಚಾಕು ಇರಿದಿದ್ದಾನೆ.
ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಅಪ್ರಾಪ್ತೆ ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಯುವಕನನ್ನು ತೇರದಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.