Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ತಿಗಳರಪಾಳ್ಯದಲ್ಲಿ ನಡೆದಿದ್ದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆದಿದ್ದ ಒಂದೇ ಕುಟುಂಬದ ಐವರ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಗುವ ಸಾಧ್ಯತೆ ಇದ್ದು, ಇಂದು ಮನೆಯಲ್ಲಿ ಮಹಜರು ಮತ್ತು ಪಂಚನಾಮೆ ಮಾಡಲಿದ್ದು, ಸಾವಿನ ಸಂಬಂಧ ಸ್ಫೋಟಕ ಮಾಹಿತಿ ಹೊರಬಿಳ ಬಹುದು ಎಂದು ಹೇಳಲಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದರು, ಅಲ್ಲದೆ ಒಂಬತ್ತು ತಿಂಗಳ ಮಗು ಸಹ ಮೃತಪಟ್ಟಿತ್ತು. ಒಟ್ಟು ಐವರು ಅಸುನೀಗಿದ್ದು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶನಿವಾರ ಎಲ್ಲ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದರು.

ಮನೆಯಲ್ಲಿ ಸಾಕಷ್ಟು ಚಿನ್ನಾಭರಣ, ನಗದು, ಆಸ್ತಿ ಪತ್ರಗಳು ಇವೆ. ಆತ್ಮಹತ್ಯೆಗೂ ಮುನ್ನ ಮಗ ಮಧುಸಾಗರ ಡೆತ್ ನೋಟ್ ಬರೆದಿಟ್ಟಿರುತ್ತಾನೆ. ಹೀಗಾಗಿ ಹಿರಿಯ ಅಧಿಕಾರಿಗಳು ನನ್ನ ಸಮ್ಮುಖದಲ್ಲೇ ಮಹಜರು ಮಾಡಬೇಕು ಎಂದು ಮನೆ ಮಾಲೀಕ ಶಂಕರ್ ಮನವಿ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದರ ಬಗ್ಗೆ ಪೊಲೀಸರಿಗೆ ಹಲವು ಅನುಮಾಗಳು ಮೂಡಿದ್ದು, ಅದೊಂದು ಆಸ್ತಿ ವಿಚಾರಕ್ಕೆ ಪದೇಪದೇ ಜಗಳವಾಗುತ್ತಿತ್ತು. ಇದೇ ವಿಚಾರಕ್ಕೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಮೃತ ಸಿಂಧುರಾಣಿಯ 9 ತಿಂಗಳ ಮಗು ಕೂಡ ಸಾವನ್ನಪ್ಪಿದ್ದು, ಮಗು ಮುಖದ ಮೇಲಿನ ಮೂಳೆಗಳು ಮುರಿದಿವೆ ಅನ್ನೋ ಮಾಹಿತಿ ಸಿಕ್ಕಿದೆ. ಹೀಗಾಗಿ ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.

ಈ ಎಲ್ಲದರ ನಡುವೆ ಮಗ ಮಧುಸಾಗರ ಬರೆದಿರುವ ಡೆತ್ ನೋಟ್ ಮತ್ತು ಎಲ್ಲರ ಬ್ಯಾಂಕ್ ಡಿಟೇಲ್ಸ್, ಮೊಬೈಲ್ ಗಳ ಡಿಟೇಲ್ಸ್ ಸಿಡಿಆರ್ ಕಲೆಹಾಕಲಾಗುತ್ತಿದೆ. ಇಂದು ನಡೆಯುವ ಮಹಜರು ನಂತರ ಮತ್ತಷ್ಟು ಮಾಹಿತಿಗಳು ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ