Please assign a menu to the primary menu location under menu

CrimeNEWSನಮ್ಮರಾಜ್ಯ

ಸಹೋದ್ಯೋಗಿ ‌ಯುವತಿ ಮನೆಗೆ ಡ್ರಾಫ್ ಮಾಡುವ‌ ವೇಳೆ ಯುವಕನ ಮೇಲೆ ಹಲ್ಲೆ‌ ಪ್ರಕರಣ: ಆರೋಪಿಗಳ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಹೋದ್ಯೋಗಿ ‌ಯುವತಿಯನ್ನು ಮನೆಗೆ ಡ್ರಾಫ್ ಮಾಡುವ‌ ವೇಳೆ ಬೈಕ್ ಅಡ್ಡಗಟ್ಟಿ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ‌ ಮಾಡಿದ್ದ ಪ್ರಕರಣದ ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಹೊಸೂರು ರಸ್ತೆಯ ಡೇರಿ ವೃತ್ತದ ಬಳಿ ಶನಿವಾರ ರಾತ್ರಿ ನಡೆದ ಘಟನೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದರನ್ವಯ‌ ದೂರು‌ ದಾಖಲಿಸಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

ಒಂದೇ ಕಂಪನಿಯಲ್ಲಿ‌ ಕೆಲಸ‌ ಮಾಡುತ್ತಿದ್ದ ಯುವಕ ಹಾಗೂ ಯುವತಿ, ರಾತ್ರಿ‌ ಕೆಲಸ‌ ಮುಗಿಸಿ ಮನೆಗೆ ಹೊರಟಿದ್ದರು. ಅವರನ್ನು‌ ಹಿಂಬಾಲಿಸಿದ್ದ ಗುಂಪು, ಬೈಕ್‌ ಅಡ್ಡಗಟ್ಟಿ ಗಲಾಟೆ ಮಾಡಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಮ್ಮ ಧರ್ಮದ ಯುವತಿಯನ್ನು ಬೈಕ್‌ನಲ್ಲಿ ಏಕೆ‌ ಕರೆದೊಯ್ಯುತ್ತಿದ್ದೀಯಾ ಎಂದು ಗುಂಪು‌ ಪ್ರಶ್ನಿಸಿತ್ತು. ನಾವಿಬ್ಬರು ಸಹೋದ್ಯೋಗಿಗಳು, ಹಲವು ಬಾರಿ ಬೈಕ್‌ನಲ್ಲಿ‌ ಹೋಗುತ್ತೇವೆ ಎಂದು ಯುವತಿ ಹಾಗೂ ಯುವಕ‌ ಹೇಳಿದ್ದರು. ಯುವತಿ ಜತೆಯೂ ವಾದ ಮಾಡಿದ್ದ ಆರೋಪಿಗಳು, ಕುಟುಂಬದವರ‌ ಮೊಬೈಲ್ ನಂಬರ್ ಪಡೆದು ಅವರ ಜೊತೆಯೂ‌ ಕೆಟ್ಟದಾಗಿ ‌ಮಾತನಾಡಿದ್ದರು. ಯುವಕನ ಮೇಲೆಯೂ‌ ಹಲ್ಲೆ‌ ಮಾಡಿದ್ದರು.

ಯುವತಿಯನ್ನು ಬೈಕ್‌ನಿಂದ‌ ಇಳಿಸಿ ಆಟೋದಲ್ಲಿ‌ ಮನೆಗೆ ಕಳುಹಿಸಿದ್ದ ಆರೋಪಿಗಳು, ಯುವತಿ ಜತೆ ಇನ್ನೊಮ್ಮೆ ಬೈಕ್‌ನಲ್ಲಿ ಹೋಗದಂತೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ.

ಘಟನೆ ವಿಡಿಯೋ‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸಹೋದ್ಯೋಗಿಗಳ ಜತೆ ಬೈಕ್ ಮೇಲೆ ಹೋಗುವುದು ತಪ್ಪಾ? ಎಂದು ಹಲವರು ಪ್ರತಿಕ್ರಿಯಿಸಿದ್ದರು. ಆರೋಪಿಗಳನ್ನು ಪತ್ತೆ ಮಾಡಿ‌ ಬಂಧಿಸುವಂತೆ ಆಗ್ರಹಿಸಿದ್ದರು.

ಅನ್ಯಕೋಮಿನ ಮಹಿಳೆಗೆ ಡ್ರಾಪ್​ ಕೊಟ್ಟಿದ್ದಕ್ಕೆ ಹಿಂದು ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದ ಡೈರಿ ಸರ್ಕಲ್​ನಲ್ಲಿ ನಡೆದ ಬಗ್ಗೆ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಹೇಶ್ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು ಈತನ ಮೇಲೆ ಅನ್ಯಕೋಮಿನ ಕೆಲ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ