Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ನಿಷ್ಕ್ರಿಯ ಮಹಿಳಾ ಆಯೋಗದ ವಜಾಗೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಡಿನ ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಮಹಿಳಾ ಆಯೋಗವು ಸಂಪೂರ್ಣ ವಿಫಲವಾಗಿದ್ದು, ಆಯೋಗದ ಈಗಿನ ಅಧ್ಯಕ್ಷರು ಹಾಗೂ ಸದಸ್ಯರನ್ನು ವಜಾ ಮಾಡಿ ನೂತನ ಆಯೋಗ ರಚಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿಯ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲ ಸ್ವಾಮಿಯವರು, “ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ.

ರಾಜ್ಯಾದ್ಯಂತ ಮಹಿಳೆಯರ ಮೇಲೆ ಕಿರುಕುಳ, ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಕನಿಷ್ಠ ಸೌಜನ್ಯ ಕೂಡ ಆಯೋಗದ ಅಧ್ಯಕ್ಷರಿಗೆ ಇಲ್ಲ. ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಸಾಧಿಸುವುದರಲ್ಲಿ ಆಯೋಗ ವಿಫಲವಾಗಿದೆ. ರಾಜ್ಯದ ಜನತೆಗೆ ಆಯೋಗದ ಮೇಲೆ ವಿಶ್ವಾಸವೇ ಇಲ್ಲವಾಗಿದೆ” ಎಂದು ಹೇಳಿದರು.

ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ ಸರಾಸರಿ ಒಂದಕ್ಕಿಂತ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಆಯೋಗ ನಿದ್ರಾವಸ್ಥೆಯಲ್ಲಿ ಇರುವುದು ಖಂಡನೀಯ. ಬಾಲ್ಯ ವಿವಾಹಗಳು ಎಗ್ಗಿಲ್ಲದೇ ನಡೆಯುತ್ತಿವೆ. ಕಾಟಾಚಾರಕ್ಕೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗುತ್ತಿದೆಯೇ ಹೊರತು, ಆರೋಪಿಗಳಿಗೆ ಶಿಕ್ಷೆ ಆಗುತ್ತಿಲ್ಲ.

ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ನೂತನ ಆಯೋಗ ರಚಿಸಲಿ ಎಂದು ಕುಶಲ ಸ್ವಾಮಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರಾದ ಉಷಾ ಮೋಹನ್‌ ಮಾತನಾಡಿ, “ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ.

ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ.

ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸುಗಳನ್ನು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಸ್ವಾತಿ ಮಾಲಿವಾಲ್‌ ಅವರನ್ನು ಇಡೀ ದೇಶವೇ ಕೊಂಡಾಡುತ್ತಿದೆ.

ನಮ್ಮ ಕರ್ನಾಟಕದ ಮಹಿಳಾ ಆಯೋಗಕ್ಕೂ ಅಂತಹ ಅಧ್ಯಕ್ಷರ ಅಗತ್ಯವಿದೆ. ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಜಾಣ ಕುರುಡು ತೋರುವ ಈಗಿನ ಅಧ್ಯಕ್ಷರಿಂದ ಮಹಿಳೆಯರಿಗೆ ಏನೂ ಉಪಯೋಗವಿಲ್ಲ. ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಈ ಬಗ್ಗೆ ಗಮನವಹಿಸಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ