Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಪರ ಸಂಘಟನೆಗಳೊಂದಿಗೆ ನಾಳೆ (ಸೆ.21) ಸಚಿವರ ಸಭೆ: ಪ್ರಮುಖ ವಿಷಯಗಳ ಕುರಿತು ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್‌ನಲ್ಲಿ ಜರುಗಿದ ಸಾರಿಗೆ ನೌಕರರ ಮುಷ್ಕರದ ವೇಳೆ ನಡೆದ ವಿವಿಧ ಘಟನೆಗಳು ಮತ್ತು ಇತರ ನೌಕರರ ಸಮಸ್ಯೆ ಕುರಿತು ಚರ್ಚಿಸುವ ಸಲುವಾಗಿ ಸಾರಿಗೆ ನೌಕರರ ಪರ ಸಂಘಟನೆಗಳ ಅಧ್ಯಕ್ಷರ ಸಭೆ ಸಾರಿಗೆ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ನಾಳೆ (ಸೆ.21) ನಡೆಯಲಿದೆ.

ಸೆಪ್ಟೆಂಬರ್‌ 21ರಂದು ಬೆಳಗ್ಗೆ 10.15ಕ್ಕೆ ನಂ.6, ಸಪ್ತ, ಸಚಿವರ ಕ್ವಾರ್ಟರ್ಸ್‌, ಬೆಂಗಳೂರು ಇಲ್ಲಿ ನಡೆಯಲಿದೆ.

ಸಭೆಗೆ ಪ್ರಮುಖವಾಗಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆಂಡ್‌ ವರ್ಕರ್ಸ್‌ ಫೆಡರೇಶನ್‌, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಫೆಡರೇಶನ್‌, ಕರ್ನಾಟಕ ರಸ್ತೆ ಮಜ್ದೂರ್‌ ಸಂಘ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಈ ಸಭೆಗೆ ಒಂದು ಸಂಘಟನೆಯಿಂದ ಗರಿಷ್ಠ ಇಬ್ಬರು ಪದಾಧಿಕಾರಿಗಳು ಹಾಜರಾಗಲು ತಿಳಿಸಲಾಗಿದೆ. ಜತೆಗೆ ಕೋವಿಡ್‌ ರೋಗ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಮಾರ್ಗದರ್ಶವನ್ನು ಪಾಲಿಸುವಂತೆ ತಿಳಿಸಲಾಗಿದೆ.

ನಾಳೆ ನಡೆಯುವ ಸಭೆಯಲ್ಲಿ ಬಹಳ ಮುಖ್ಯವಾಗಿ ನೌಕರರ ಪರ ಸಂಘಟನೆಗಳ ಪದಾಧಿಕಾರಿಗಳಿಂದ ವೇತನ ಪರಿಷ್ಕರಣೆ ಮಾಡುವ ಕುರಿತು ಸಲಹೆ ಸೂಚನೆಗಳನ್ನು ಪಡೆಯಬಹುದು. ಜತೆಗೆ ಮುಷ್ಕರದ ವೇಳೆ ಆಗಿರುವ ಪೊಲೀಸ್‌ ಪ್ರಕರಣಗಳು ಸೇರಿ ನೌಕರರು ಅನುಭವಿಸುತ್ತಿರುವ ಬಹುತೇಕ ಸಮಸ್ಯೆಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

ಇನ್ನು ನೌಕರರ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ತುಂಬ ಕಾಳಜಿ ತೋರುತ್ತಿದ್ದು, ಪ್ರತಿ ನಾಲ್ಕು ವರ್ಷಕೊಮ್ಮೆ ವೇತನ ಪರಿಷ್ಕರಣೆ ವೇಳೆ ಆಗುತ್ತಿರುವ ಹೋರಾಟಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲೂ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ