Vijayapatha – ವಿಜಯಪಥ
Friday, November 1, 2024
CrimeNEWSನಮ್ಮರಾಜ್ಯ

ರಾಜ್ಯದ ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಪ್ರಕರಣ: ಮತ್ತೆ ಮೂವರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಖಿಲ ಭಾರತ ಹಿಂದೂಮಹಾಸಭಾದ ಪ್ರಮುಖರಾದ ಕುಳಾಯಿಯ ರಾಜೇಶ್ ಪವಿತ್ರನ್ (40), ಅಡ್ಕಾರಿನ ಸಂದೀಪ್ ಗಣೇಶ್ ಶೆಟ್ಟಿ (40), ಬಂಟ್ವಾಳದ ಪ್ರೇಮ್ ರಾಜೇಶ್ ಶೆಟ್ಟಿ (48) ಬಂಧಿತರು.

ಇತ್ತೀಚೆಗೆ ಹಿಂದೂವಿರೋಧಿ ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಇನ್ನು ನೀವುಯಾವ ಲೆಕ್ಕ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರನನ್ನು ಭಾನುವಾರ ಬಂಧಿಸಲಾಗಿತ್ತು.

2019ರಲ್ಲಿ ನಾಥೂರಾಮ್ ಗೋಡ್ಸೆ ಜನ್ಮ ದಿನಾಚರಣೆಮಾಡಿ, ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಪ್ರಕಟಿಸಿದ್ದ ಸಂಬಂಧ, ಧರ್ಮೇಂದ್ರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರ ಕರಣ ದಾಖಲಾಗಿತ್ತು.

2017ರ ಡಿಸೆಂಬರ್ 22ರಂದು ಕರಾವಳಿ ಉತ್ಸ ವದಲ್ಲಿ ನಟ ಪ್ರಕಾಶ್ ರಾಜ್ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ ಅವರ ಮೇಲೆ ಮೊಟ್ಟೆ ಎಸೆದ ಬಗ್ಗೆ ರಾಜೇಶ್ ಪವಿತ್ರನ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಹನಿಟ್ರ್ಯಾಪ್ ನಡೆಸಿದ ಬಗ್ಗೆ ಕೂಡ ಈ ವ್ಯ ಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಒಂಬತ್ತು ವರ್ಷಗಳ ಹಿಂದೆ ಗಾಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ನಂತರ ಖುಲಾಸೆಗೊಂಡಿತ್ತು . ಇನ್ನುಳಿದ ಆರೋಪಿಗಳಾದ ಕಮಲಾಕ್ಷ ಪಡೀಲ್, ಸುಧಾಕರ್ ಶೆಟ್ಟಿ, ಪ್ರವೀಣ್ ಶೆಟ್ಟಿ , ಉಲ್ಲಾಸ್ ಪತ್ತೆಗೆ ಜಾಲ ಬೀಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ