Please assign a menu to the primary menu location under menu

Wednesday, January 15, 2025
NEWSನಮ್ಮರಾಜ್ಯರಾಜಕೀಯ

ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ : ಮಾಜಿ ಸಿಎಂ ಎಚ್‌ಡಿಕೆ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಭದ್ರಾವತಿ: 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಗೋಣಿಬೀಡುವಿನಲ್ಲಿ ಕ್ಷೇತ್ರದ ಅಭ್ಯರ್ಥಿಯನ್ನು ಮಂಗಳವಾರ ಘೋಷಿಸಿದ್ದಾರೆ.

ಗೋಣಿಬೀಡಿನಲ್ಲಿರುವ ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಮಾತನಾಡಿದ ಬಳಿಕ ಮಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿಗೌಡ ಅವರನ್ನು ಕಣಕ್ಕಿಳಿಸಲಾಗುವುದು ಎಂದು ಘೋಷಣೆ ಮಾಡಿದರು.

ಅಪ್ಪಾಜಿಗೌಡರ ಬೆಂಬಲಿಗರ ದನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ನಿರ್ಧರಿಸಿದ್ದಾರೆ. ಹೀಗಾಗಿ, ಸಹೋದರಿ ಶಾರದಾ ಅಪ್ಪಾಜಿಗೌಡ ಅವರನ್ನು ಮುಂಬರುವ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿ ಎಂದು ಆಯ್ಕೆ ಮಾಡುವುದಾಗಿ ಹೇಳಿದರು.

ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರ ನಡೆಸಲಾಗುವುದು. ಆ ಕಾರ್ಯಾಗಾರದಲ್ಲಿ ಎಲ್ಲ ವಿಚಾರಗಳ ಕುರಿತು ಚರ್ಚೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಬಸವ ಕೇಂದ್ರದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ, ಕನಕ ಗುರುಪೀಠ ಹೊಸದುರ್ಗ ಶಾಖೆಯ ಶ್ರೀ ಈಶ್ವರಾನಂದ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಜಗದ್ಗುರು ಪೀಠದ ಶ್ರೀ ಬಸವನಾಗಿದೇವ ಶರಣರು.

ಚಿತ್ರದುರ್ಗ ಬಂಜಾರ ಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿಹರ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಹಿರಿಯೂರು ಕೋಡಿಹಳ್ಳಿ ಬೃಹನ್ಮಠದ ಮಾದಾರ ಪೀಠದ ಶ್ರೀ ಆದಿಜಾಂಭವ ಮಾರ್ಕಾಂಡಮುನಿ ಸ್ವಾಮೀಜಿ.

ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ, ಶರೀ ಕ್ಷೇತ್ರ ಭದ್ರಗಿರಿಯ ಶ್ರೀ ಮುರುಗೇಶ ಸ್ವಾಮೀಜಿ, ಸಿಎಸ್‍ಐ ವೇನ್ಸ್ ಮೆಮೋಡಿಯಲ್ ಚರ್ಚಿನ ಶಿವಮೊಗ್ಗ ವಲಯಾಧ್ಯಕ್ಷ ರೆವೆರೆಂಡ್ ಜಿ.ಸ್ಟ್ಯಾನ್ಲಿ, ಶಿವಮೊಗ್ಗದ ದಾರುಲ್ ಇ ಹಸನ್ ಮದರಸ ಪ್ರಿನ್ಸಪಾಲ್ ಶ್ರೀ ಮೌಲಾನ ಶಾಹುಲ್ ಹಮೀದ್.

ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ, ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್, ಪ್ರಮುಖರಾದ ಆರ್.ಕರುಣಾಮೂರ್ತಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

Editordev
the authorEditordev

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ