Please assign a menu to the primary menu location under menu

NEWSದೇಶ-ವಿದೇಶರಾಜಕೀಯ

ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾದ ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ : ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ.

ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದ ಸರಣಿ ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ ಎಂದಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ.

ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ