Please assign a menu to the primary menu location under menu

NEWSನಮ್ಮಜಿಲ್ಲೆ

ಬಿಬಿಎಂಪಿ ವ್ಯಾಪ್ತಿ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿ ಮಾರ್ಪಡಿಸಿ : ಗೌರವಗುಪ್ತ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವಗುಪ್ತ ಆದೇಶ ಹೊರಡಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ಕಟ್ಟಡ ಉಪವಿಧಿ – 2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ಮತ್ತು National Building Code of India – 2016 ರ ಅನ್ವಯ ನಕ್ಷೆ ಮಂಜೂರಾತಿ,

ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿಗಳನ್ನು ಸಂಪೂರ್ಣವಾಗಿ ಮುಚ್ಚುವುದು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ನಿರ್ವಹಿಸಲು ನಿಯಮಾನುಸಾರ ಅವಕಾಶವಿಲ್ಲ.

ಆದಾಗ್ಯೂ ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಅಸುರಕ್ಷತೆಗೆ ಕಾರಣವಾಗುವಂತೆ ಕಟ್ಟಡ ಮಾರ್ಪಾಡು ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿನ್ನೆಲೆಯಲ್ಲಿ ನಿಯಮಾನುಸಾರ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ವಸತಿ ಸಮುಚ್ಚಯಗಳಲ್ಲಿ/ಇತರೆ ಕಟ್ಟಡಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿದೆ.

ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ/ಇತರ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿಗಳನ್ನು ಪಡೆಯಲು ಮುಖ್ಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ