NEWSರಾಜಕೀಯಶಿಕ್ಷಣ-

ಶಾಲಾ ಶುಲ್ಕ ಕುರಿತು ಸೆ.26ರಂದು ರಮೇಶ್‌ ಕುಮಾರ್‌ ಉಪಸ್ಥಿತಿಯಲ್ಲಿ ಎಎಪಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಚಿಂತನ- ಮಂಥನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಶಾಲೆಗಳ ದುಬಾರಿ ಶುಲ್ಕ ಹಾಗೂ ಸಂಕಷ್ಟದಲ್ಲಿರುವ ಪೋಷಕರಿಗೆ ನೆರವಾಗುವುದರಲ್ಲಿ ಸರ್ಕಾರದ ಪಾತ್ರದ ಕುರಿತು ಆಮ್‌ ಆದ್ಮಿ ಪಾರ್ಟಿಯು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಆರ್.ರಮೇಶ್‌ ಕುಮಾರ್‌ ಅವರ ಉಪಸ್ಥಿತಿಯಲ್ಲಿ ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಿದೆ.

ಇಂದು ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರದ ಎಎಪಿ ಉಪಾಧ್ಯಕ್ಷ ಸುರೇಶ್‌ ರಾಥೋಡ್‌, “ಸೆ. 26ರ ಭಾನುವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10:30ರಿಂದ ಮಧ್ಯಾಹ್ನ 2 ಗಂಟೆಯ ತನಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಮಾತನಾಡಲಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ತತ್ತರಿಸಿರುವ ರಾಜ್ಯದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ. ಸರ್ಕಾರವು ಈ ಬಗ್ಗೆ ಜಾಣಕುರುಡು ಪ್ರದರ್ಶಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಶಿಕ್ಷಣ ಮಾಜಿ ಸಚಿವ ಸುರೇಶ್ ಕುಮಾರ್ ಅವರ ಅವೈಜ್ಞಾನಿಕ ನಿರ್ಧಾರಗಳಿಂದ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸಿದೆ.

ಸುರೇಶ್ ಕುಮಾರ್ ಅವರು ಎಲ್ಲ ಖಾಸಗಿ ಶಾಲೆಗಳಿಗೆ 30% ಶುಲ್ಕ ಇಳಿಸಬೇಕೆಂದು ಆದೇಶಿಸಿದ್ದರು. ಆದರೆ ಹೇಗೆ ಇಳಿಸಬೇಕು, ಖಾಸಗಿ ಶಾಲೆಗಳನ್ನು ಆ ನಷ್ಟವನ್ನು ಹೇಗೆ ಭರಿಸಿಕೊಳ್ಳಬೇಕೆಂದು ಸ್ಪಷ್ಟತೆ ನೀಡಿರಲಿಲ್ಲ. ಇದರಿಂದಾಗಿ ಸಚಿವರ ಆದೇಶಕ್ಕೆ ನ್ಯಾಯಾಲಯದಲ್ಲಿ ಹಿನ್ನಡೆಯಾಯಿತು. ಪರಿಣಾಮವಾಗಿ ಬಡ ಹಾಗೂ ಮಧ್ಯಮ ವರ್ಗದ ಪೋಷಕರು ದಿಕ್ಕು ತೋಚದಂತಾಗಿದ್ದಾರೆ ಎಂದು ಸುರೇಶ್‌ ರಾಥೋಡ್‌ ಬೇಸರ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರಾದ ಉಷಾ ಮೋಹನ್‌ ಮಾತನಾಡಿ, “ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶೌಚಾಲಯ, ಶುದ್ಧ ಕುಡಿಯುವ ನೀರು, ಕಂಪ್ಯೂಟರ್‌, ಸುಸಜ್ಜಿತ ಕೊಠಡಿ ಮುಂತಾದ ಮೂಲಸೌಕರ್ಯಗಳಿಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಸೇರಿಸಬೇಕಾಗಿದೆ.

ಕೋವಿಡ್‌ನಿಂದ ತತ್ತರಿಸಿರುವ ವೇಳೆ ಅಲ್ಲಿನ ದುಬಾರಿ ಶುಲ್ಕವನ್ನು ಬಡ ಪೋಷಕರು ಹೇಗೆ ತಾನೇ ಕಟ್ಟಬಹುದು? ದೆಹಲಿಯ ಕೇಜ್ರಿವಾಲ್‌ ಸರ್ಕಾರವು ಸರ್ಕಾರಿ ಶಾಲೆಗಳನ್ನು ಎಲ್ಲ ರೀತಿಯಲ್ಲೂ ಅಭಿವೃದ್ಧಿಪಡಿಸಿದೆ.

ಇಲ್ಲಿನ ಸರ್ಕಾರಿ ಶಾಲೆಗಳೂ ಅಭಿವೃದ್ಧಿಯಾಗಿದ್ದರೆ ಖಾಸಗಿ ಶಾಲೆಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ನಾವು ಇಷ್ಟೊಂದು ಆಗ್ರಹಿಸುವ ಸಂದರ್ಭವೇ ಬರುತ್ತಿರಲಿಲ್ಲ. ಆದರೆ ನಮ್ಮ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ಹಾಗೂ ಶಾಲಾ ಅಭಿವೃದ್ಧಿಯು ಆದ್ಯತೆಯ ವಿಷಯವಾಗಿಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ