NEWSನಮ್ಮಜಿಲ್ಲೆನಮ್ಮರಾಜ್ಯ

ಹಂತಹಂತವಾಗಿ ನೌಕರರ ಮರು ನೇಮಕಕ್ಕೆ ಚಾಲನೆ ನೀಡಲಾಗಿದೆ : ಸಾರಿಗೆ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಾರಿಗೆ ನೌಕರರ ಮುಷ್ಕರದ ಸಮಯದಲ್ಲಿ ಮಾಡಿರುವ ನೌಕರರ ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಪ್ರಕರಣಗಳನ್ನು ಹಂತಹಂತವಾಗಿ ಹಿಂಪಡೆಯಲಾಗುತ್ತಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಜಿಲ್ಲೆಯ ಚಿಕ್ಕೋಡಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮತ್ತು ಲೋಕಾರ್ಪಣೆ ಕಾರ್ಯಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದರು.

ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಪ್ರಕರಗಳಿರುವ ಚಾಲಕರು, ಮೆಕ್ಯಾನಿಕ್‌ಗಳು, ತರಬೇತಿ ನೌಕರರು ಹಾಗೂ ನಿರ್ವಾಹಕರನ್ನುಈ ತಿಂಗಳ ಅಂತ್ಯದ ವೇಳಗೆ ಅಂದರೆ ಹಂತ ಹಂತವಾಗಿ ವಾಪಸ್‌ ಮಾತೃ ಘಟಕಗಳಿಗೆ ಕರೆಸಿಕೊಳ್ಳುವ ಮೂಲಕ ಅವರಿಗೆ ಮತ್ತೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಹೇಳಿದರು.

ಹೀಗಾಗಿ ಹೆಚ್ಚೆಂದರೆ ಒಂದು ವಾರದೊಳಗಾಗಿ ಸಾರಿಗೆ ನೌಕರರ ಸಮಸ್ಯೆಯನ್ನು ಬಗೆ ಹರಿಸಲಾಗುವುದು. ಸಾರಿಗೆ ನೌಕರರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಲಾಗುವುದು. ಆದರೆ ನೌಕರರು ಸರ್ಕಾರಕ್ಕೆ ಮುಜುಗರವಾಗುವ ರೀತಿ ಹೋರಾಟ, ಪ್ರತಿಭಟನೆಗಳನ್ನು ಮಾಡಬಾರದು ಎಂದು ಮನವಿ ಮಾಡಿದರು.

ಸಾರಿಗೆ ನೌಕರರ ನಿಷ್ಠೆ: ಸಾರಿಗೆ ನೌಕರರು ಹಗಲಿರುಳು ಮಳೆ, ಬಿಸಿಲು, ಹಬ್ಬ-ಹರಿದಿನ ಎನ್ನದೆ ಅತಿ ಹೆಚ್ಚು ಸಮಯ ಒತ್ತಡದಲ್ಲಿ ಕುಟುಂಬವನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರದ ಒಂದು ಅಂಗವಾಗಿದ್ದಾರೆ. ಇತರ ಇಲಾಖೆಯ ನಿಗಮಗಳಿಗೆ ಹೋಲಿಸಿದರೆ ಕಡಿಮೆ ವೇತನ ಪಡೆಯುತ್ತಿದ್ದು ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈ ಎಲ್ಲ ಕಷ್ಟ-ನಷ್ಟ ಅನುಭವಿಸಿಕೊಂಡು ಶಾಂತಿಯುತವಾಗಿ ಹೋರಾಟ ಮಾಡುತ್ತಾ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದಾರೆ. ತಮ್ಮ ಸವಲತ್ತುಗಳನ್ನು ಪಡೆಯಲು ಹೋರಾಟ ಮಾಡಿದ್ದರು.

ಆದರೆ, ಈ ಹೋರಾಟದ ಹಾದಿಯಲ್ಲಿ ಆಡಳಿತವರ್ಗ ನೌಕರರ ವಿರುದ್ಧ ತೆಗೆದುಕೊಂಡ ಕ್ರಮಗಳಾದ ವರ್ಗಾವಣೆ, ವಜಾ ಅಮಾನತು ಮತ್ತು ಪೊಲೀಸ್ ಪ್ರಕರಣಗಳು ನಿಗಮಗಳ ಆದಾಯವನ್ನೇ ಬುಡಮೇಲು ಮಾಡಿದೆ.

ಜತೆಗೆ 300 ರಿಂದ 450 ಕಿಲೋಮೀಟರ್ ದೂರಕ್ಕೆ ವರ್ಗಾವಣೆ ಮಾಡಿರುವ ಮಹಿಳಾ ಹಾಗೂ ನೌಕರರ ಕುಟುಂಬಗಳ ಭವಿಷ್ಯ ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯ ರೂಪಿಸುವಲ್ಲಿ ಅಧಿಕಾರಿಗಳು ತಾತ್ಸಾರ ತೋರಿದ್ದಾರೆ. ಒಂದು ರೀತಿ ನೌಕರರನ್ನು ತಮ್ಮ ಶತೃಗಳಂತೆ ಈಗಲೂ ಬಿಂಬಿಸಿಕೊಳ್ಳುತ್ತಿದ್ದಾರೆ.

ಈ ಎಲ್ಲವನ್ನು ಮನಗಂಡಿರುವ ಸಚಿವ ಶ್ರೀರಾಮುಲು ಅವರು ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣವನ್ನು ರದ್ದುಪಡಿಸಿ, ಏಪ್ರಿಲ್‌ 6-2021ರ ಹಿಂದೆ ಇದ್ದ ಸ್ಥಿತಿಯನ್ನು ನೌಕರರಿಗೆ ಒದಗಿಸಿ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

ಆದರೆ, ಎಲ್ಲೋ ಒಂದು ಕಡೆ ನಿಗಮಗಳ ಆಡಳಿತ ವರ್ಗ ಆಮೆ ವೇಗದಲ್ಲಿ ಸಾಗುತ್ತಿರುವುದರಿಂದ ಮರಳಿ ನೌಕರರು ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿಳಂಬವಾಗುತ್ತಿದೆ. ಇದರಿಂದ ಸಂಸ್ಥೆಗೂ ಭಾರಿ ಪ್ರಮಾಣದ ನಷ್ಟವಾಗುತ್ತಿದೆ. ಈ ರೀತಿ ನಷ್ಟವಾಗದಂತೆ ಆಡಳಿತವರ್ಗವೂ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕಿದೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ