CrimeNEWSನಮ್ಮಜಿಲ್ಲೆ

ವಿಚಾರಣೆ, ಸಮನ್ಸ್ ನೀಡುವ ನೆಪದಲ್ಲಿ ಅಪ್ರಾಪ್ತೆಯನ್ನೇ ಗರ್ಭಿಣಿ ಮಾಡಿದ ಕಡಬ ಠಾಣೆ ಪೊಲೀಸ್‌ ಸಿಬ್ಬಂದಿ ಶಿವರಾಜ್‌

ವಿಜಯಪಥ ಸಮಗ್ರ ಸುದ್ದಿ

ಕಡಬ: ಎರಡು ವರ್ಷಗಳ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತೆಯನ್ನು ವಿಚಾರಣೆ ಹಾಗೂ ಸಮನ್ಸ್ ನೀಡುವ ನೆಪದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಈ ಸಂಬಂಧ ಕಡಬ ಠಾಣೆಯ​ ಸಿಬ್ಬಂದಿ ಶಿವರಾಜ್ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲೇ ದೂರು ನೀಡಲಾಗಿದೆ. ಯುವತಿಯ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದಾನೆ.

ಇನ್ನು ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ. ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೊಲೀಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ ತಂದೆ ದೂರಿನಲ್ಲಿ ದಾಖಲಿಸಿದ್ದಾರೆ.

ಯುವತಿಯ ತಂದೆ ಹಾಗೂ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೆ. ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೊಲೀಸ್‌ ಸಿಬ್ಬಂದಿ ಶಿವರಾಜ್ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ.

ಆ ವೇಳೆ ಪರಿಚಯವಾಗಿದ್ದ ಎಂದು ಸಂತ್ರಸ್ತೆಯ ತಂದೆ ಹೇಳಿಕೆ ನೀಡಿದ್ದರು, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು. ಆದರೆ ಇಂತಹ ಕೆಟ್ಟ ಚಾಳಿ ಇರುವುದು ನನ್ನ ಗಮನಕ್ಕೆ ಬರಲಿಲ್ಲ ಎಂದು ತಿಳಿಸಿದ್ದಾರೆ.

ಇತ್ತಿಚೆಗೆ ಆರೋಗ್ಯದಲ್ಲಿ ಏರು ಪೇರಾಗಿ ಮಗಳು ಗರ್ಭಿಣಿ ಆಗಿರುವುದು ತಿಳಿದು ಬಂದು ಮಗಳನ್ನು ವಿಚಾರಿಸಿದಾಗ ಕಡಬ ಪೊಲೀಸ್‌ ಶಿವರಾಜ್ ಎಂಬಾತ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಆದುದರಿಂದ ನನಗೆ ಐದೂವರೆ ತಿಂಗಳು ಆಗಿದೆ ಎಂದು ಸತ್ಯ ಬಾಯಿಬಿಟ್ಟಿದ್ದಳು.

ಇದೇ ವೇಳೆ ನಾನು ಶಿವರಾಜ್ ನನ್ನು ಸಂಪರ್ಕ ಮಾಡಿ ನನ್ನ ಮಗಳನ್ನು ಮದುವೆಯಾಗು ಎಂದು ಹೇಳಿದ್ದೆ. ಆ ವೇಳೆ ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ.

ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ. ಈ ಬಳಿಕ ನಾನು ತುಂಬಾ ಅಘಾತಕ್ಕೊಳಗಾಗಿದ್ದೆ. ಹೀಗಿರುವಾಗ ಸೆ. 18 ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಪತ್ನಿ ನನಗೆ ಫೋನ್ ಮಾಡುತ್ತಾಳೆ ಆದರೆ ಎಲ್ಲಿದ್ದೇನೆ ಎಂದು ಹೇಳುತ್ತಿಲ್ಲ, ಅಬಾರ್ಷನ್ ಮಾಡಲಾಗಿದೆ. ಅದಕ್ಕೆ 35,000 ರೂ.ಗಳನ್ನು ಶಿವರಾಜ್ ಆನ್ಲೈನ್ ಟ್ರಾನ್ಸ್ಪರ್ ಮಾಡಿದ್ದಾನೆಂದೂ, ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ ಎಂದು ದೂರಲಾಗಿದೆ.

ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು ಎಂದು ಸಂತ್ರಸ್ತೆ ತಂದೆ ಮನವಿ ಮಾಡಿದ್ದಾರೆ.

ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ, ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನೀತಿ ಎನ್ನುವ ಸಾಮಾಜಿಕ ಸಂಘಟನೆ ಕಡೆಯಿಂದ ಕರ್ನಾಟಕ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಇನ್ನೊಂದು ದೂರು ನೀಡಲಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ