NEWSನಮ್ಮರಾಜ್ಯರಾಜಕೀಯ

ಜನ ಸಾಮಾನ್ಯರ ಕಷ್ಟವನ್ನೇ ಕೇಳುವವನು ನಾನು, ನಮ್ಮ ಶಾಸಕರ ಕಷ್ಟ ಕೇಳಲ್ವಾ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಪಕ್ಷ ಬಿಡಬೇಕು ಅಂದುಕೊಂಡವರಿಗೆ ಅದೊಂದು ನೆಪ ಅಷ್ಟೇ. ನಾನು ಯಾರನ್ನೂ ಕಡೆಗಣಿಸಿಲ್ಲ. ಜನ ಸಾಮಾನ್ಯರ ಕಷ್ಟವನ್ನೇ ಕೇಳುವವನು ನಾನು. ನಮ್ಮ ಶಾಸಕರ ಕಷ್ಟ ಕೇಳಲ್ವಾ..? ಪಕ್ಷ ಬಿಡಬೇಕು ಅಂದುಕೊಂಡವರು ನೀಡುವ ಸಬೂಬು ಇದು ಅಷ್ಟೇ ಎಂದು ನೇರ ಮಾತುಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿ ಫಾರ್ಮ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಜನತಾ ಪರ್ವ 1.O ಹಾಗೂ ಮಿಷನ್ 123ಗಾಗಿ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಕಾರ್ಯಾಗಾರದ ಮೊದಲ ದಿನದ ಅಂತ್ಯದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಸೆಳೆಯುವ ಕೆಲಸ ಕೆಲವರಿಂದ ಆಗುತ್ತಿದೆ. ಹೀಗಾಗಿ ನಾನು ಅಂತಹ ಕೆಲ ಅಭ್ಯರ್ಥಿಗಳನ್ನು ಕಾರ್ಯಾಗಾರಕ್ಕೆ ಕರೆದಿಲ್ಲ. ಅಂಥ ಕಡೆಯಲ್ಲ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನು ಪಕ್ಷದಿಂದ ಹೊರಗೆ ಕಾಲಿಟ್ಟಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಹೋಗಬೇಕು ಎಂದುಕೊಂಡವರು ಹೋಗಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪಕ್ಷ ಬಲವಾಗುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಪಕ್ಷದಿಂದ ಹೊರಗೆ ಕಾಲಿಟ್ಟಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಸಮಯ ಇದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆ ಬಗ್ಗೆ ಚಿಂತನ ಮಂಥನ ನಡೆಯುತ್ತಿದೆ. ಹಲವಾರು ಆಯಾಮಗಳಲ್ಲಿ ತರಬೇತಿ ಕೊಡುವ ಕಾರ್ಯಕ್ರಮ ಇದಾಗಿದೆ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರ್ಕಾರ ತರಬೇಕಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಚುನಾವಣೆಗೆ 18 ತಿಂಗಳು ಬಾಕಿ ಇದೆ. ಅದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷ ಸಂಘಟನೆಗೆ ಕ್ರಮ ವಹಿಸಲಾಗಿದೆ. ಈ ಸಮಯದಲ್ಲಿ ಹೋಬಳಿ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡುವೆ ಎಂದು ಎಚ್‌ಡಿಕೆ ತಿಳಿಸಿದರು.

ಕಾರ್ಯಾಗಾರದಲ್ಲಿ ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯದ ದಾರಿಯ ಬಗ್ಗೆಯೂ ಮಾತನಾಡಿದ್ದಾರೆ. ಇದು ಮುಂದಿನ ಚುನಾವಣೆ ಅಭ್ಯರ್ಥಿಗಳಿಗೆ ದಾರಿದೀಪವಾಗಲಿದೆ. ಅವರು ನಡೆದು ಬಂದ ದಾರಿ ಬಗ್ಗೆ ಹೇಳಿದ್ದಾರೆ ತಿಳಿಸಿದರು.

ಜಾತ್ಯತೀತ ಜನತಾದಳಕ್ಕೆ ಇರುವ ಅವಕಾಶಗಳನ್ನು ಉತ್ತಮವಾಗಿ ಬಳಕೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದರು.

ಪಕ್ಷ ಸಂಘಟನೆಗೆ ಹೊಸ ರೀತಿಯಾಗಿ ಸಜ್ಜಾಗುತ್ತಿದ್ದೇವೆ. ಆಧುನಿಕ ಟೆಕ್ನಾಲಜಿಯನ್ನು ಬಳಸಿಕೊಳ್ಳಲಾಗುತ್ತಿದೆ. ಮುಂದಿನ ಚುನಾವಣೆಗೆ ಸಕಲ ರೀತಿಯ ಸಿದ್ದತೆಗಳು ಆಗಿವೆ ಎಂದು ಕುಮಾರಸ್ವಾಮಿ ಹೇಳಿದರು.

ಮೊದಲ ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳಿಗೆಲ್ಲರಿಗೂ ಪ್ರಶ್ನಾವಳಿಯ ಕಿರು ಹೊತ್ತಿಗೆ ನೀಡಲಾಗಿತ್ತು. ಪ್ರತಿಯೊಬ್ಬರೂ ಆಸಕ್ತಿಯಿಂದ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರೆ. ಅವರವರ ಕ್ಷೇತ್ರಗಳಿಗೆ ಯಾವ ರೀತಿ ಹೊತ್ತು ಕೊಟ್ಟಿದ್ದಾರೆ. ಅವರಿಗಿರುವ ಅಡೆತಡೆಗಳು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಉತ್ತರ ನೀಡಿದ್ದಾರೆ. ಒಟ್ಟು 61 ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅಭ್ಯರ್ಥಿಗಳಾಗಿ ಏನು ಸಿದ್ದತೆ ಮಾಡಿಕೊಂಡಿದ್ದಾರೆ ಅನ್ನೋದನ್ನು ಅವರು ಬರೆದಿದ್ದಾರೆ ಎಂದು ಕುಮಾರಸ್ವಾಮಿ ವಿವರಿಸಿದರು.

ನಾಳೆಯ ದಿನದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಜನತೆ ಮುಂದೆ ತೆಗೆದುಕೊಂಡು ಹೋಗುವುದು ಹೇಗೆ? ಮಿಷನ್ 123 ಪ್ಲಸ್ ಗೆ ಏನು ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಕಾರ್ಯಕ್ರಮ ಇರಲಿದೆ ಎಂದು ಹೇಳಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ