CrimeNEWSನಮ್ಮಜಿಲ್ಲೆಸಿನಿಪಥ

ನಟಿ ಸೌಜನ್ಯ ಆತ್ಮಹತ್ಯೆಯೋ ಕೊಲೆಯೋ?: ಕುಂಬಳಗೋಡು ಠಾಣೆಯಲ್ಲಿ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಟಿ ಸೌಜನ್ಯ ಅಲಿಯಾಸ್ ಸವಿಮಾದಪ್ಪರ ತಂದೆ ಪ್ರಭುಮಾದಪ್ಪ ಕುಂಬಳಗೋಡು ಠಾಣೆ ಪೊಲೀಸರಿಗೆ ಗುರುವಾರ ರಾತ್ರಿ ದೂರು ನೀಡಿದರು.

ಸೌಜನ್ಯ ಆಪ್ತ ಸಹಾಯಕ ಹಾಗೂ ನಟನೊಬ್ಬ ನ ವಿರುದ್ಧ ಅವರುದೂರು ನೀಡಿದ್ದು , ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಸೌಜನ್ಯ ಬಳಿ ದೊರಕಿದ ಡೆತ್‌ ನೋಟ್‌ ಮೂರುನಾಲ್ಕು ದಿನದ ಹಿಂದೆಯೇ ಬರೆದಿದ್ದು ಎನ್ನಲಾಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಭುಮಾದಪ್ಪ ‘ ಮಗಳು ಕಳೆದ ಐದು ವರ್ಷದಿಂದ ಬೆಂಗಳೂರಿನಲ್ಲಿದ್ದು, ಎರಡು ವರ್ಷದಿಂದ ಈ ಅಪಾರ್ಟ್ಮೆಂಟ್ನಲ್ಲಿ ಒಬ್ಬಳೇ ಇದ್ದಳು. ಕೆಲ ಕಾಲ ಗಗನಸಖಿಯಾಗಿಯೂಕೆಲಸಮಾಡಿದ್ದಳು. ಚೌಕಟ್ಟು , ಫನ್, ಅರ್ಜುನ್ ಗೌಡ ಚಿತ್ರ ಗಳಲ್ಲಿ ಆಕೆ ನಟಿಸಿದ್ದಳು ಎಂದು ತಿಳಿಸಿದರು.

ಇನ್ನು ಬೆಳಗ್ಗೆಯಷ್ಟೇ ಮೊಬೈಲ್ ಕರೆಮಾಡಿ, ಕೊಡಗಿಗೆ ಬರುವುದಾಗಿ ಹೇಳಿದ್ದಳು. ಯಾರೋ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ಕುಶಾಲನಗರ ತಾಲೂಕಿನ ಶುಂಠಿಕೊಪ್ಪ ದ ಅಂದಗೋವೆ ಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಸುವುದಾಗಿ ಅವರು ತಿಳಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?