ಬೆಂಗಳೂರು: ರಾಜಧಾನಿಯ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಹೋದ್ಯೋಗಿಗಳೊಂದಿಗೆ ಭೇಟಿ ನೀಡಿ ಅಧಿಕೃತವಾಗಿ ದಸರಾ ಉದ್ಘಾಟನೆಗೆ ಆಹ್ವಾನಿಸಲಾಯಿತು.
ಮೈಸೂರು ಪೇಟಾ ತೊಡಿಸಿ, ಫಲಪುಷ್ಪ ತಾಂಬೂಲದೊಂದಿಗೆ, ಅಂಬಾರಿಯ ವಿಗ್ರಹದ ನೆನಪಿನ ಕಾಣಿಕೆ ನೀಡಿ ಗೌರವಿಸುವ ಮೂಲಕ ಉದ್ಘಾಟನೆಗೆ ಆಹ್ವಾನಿಸಲಾಗಿದ್ದು, ದಸರಾ ಸಂಬಂಧಿತ ಸಿದ್ಧತೆಗಳು ಯಾವುದೇ ಅಡೆ ತಡೆ ಇಲ್ಲದೆ ನಡೆಯುತ್ತಿವೆ ಎಂದು ಸಹಕಾರ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.
ಕಂದಾಯ ಸಚಿವ ಅಶೋಕ್, ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಮುಡಾ ಅಧ್ಯಕ್ಷ ಎಂ.ಸಿ.ರಾಜೀವ್, ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀವತ್ಸವ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ.
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಅಭ್ಯರ್ಥಿ ಸಿದ್ದರಾಮೇಗೌಡ ಸೇರಿದಂತೆ ನಾನಾ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.