NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರನ ಪತ್ನಿ,ಮಕ್ಕಳ ಆತ್ಮಹತ್ಯೆ ಹೃದಯ ವಿದ್ರಾವಕ: ಸಾವಿಗೆ ಸರ್ಕಾರವೇ ಕಾರಣ ಎಂದು ಕಿಡಿಕಾರಿದ ಎಚ್‌ಡಿಕೆ

ರಾಜ್ಯದಲ್ಲಿರೋದು ಕೊಲೆಗೆಡುಕ ಸರ್ಕಾರ ಎಂದು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಹಾಗೂ ಆಕೆಯ ಮಕ್ಕಳ ಆತ್ಮಹತ್ಯೆ ಘಟನೆ ಹೃದಯ ವಿದ್ರಾವಕ ಎಂದು ನೊಂದು ನುಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಸಾವುಗಳಿಗೆ ಸರಕಾರವೇ ನೇರ ಕಾರಣ ಎಂದು ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಭಾನುವಾರ ಬೆಳಗ್ಗೆ ಆರಂಭವಾದ ಎರಡನೇ ಹಂತದ ‘ಜನತಾ ಪರ್ವ 1.O’ ಹಾಗೂ ‘ಮಿಷನ್ 123’ ಕಾರ್ಯಾಗಾರಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ತವ್ಯದಲ್ಲಿ ಇದ್ದಾಗಲೇ ಕೊರೊನಾ ಮಹಾಮಾರಿಗೆ ತುತ್ತಾಗಿ ಸಾವನ್ನಪ್ಪಿದ ಸಾರಿಗೆ ನೌಕರನ ಕುಟುಂಬಕ್ಕೆ ಸರಕಾರ ಅರು ತಿಂಗಳ ಒಳಗಾಗಿ ಅನುಕಂಪದ ಉದ್ಯೋಗ ನೀಡಿ ಪರಿಹಾರದ ಹಣವನ್ನು ನೀಡಬೇಕು. ಅಲ್ಲದೆ ಕೋವಿಡ್ ವಾರಿಯರ್‌ಗಳಿಗೆ ನೀಡುವ ಪರಿಹಾರವನ್ನು ಕೂಡ ನೀಡಿಲ್ಲ. ಆದರೆ ಆ ಹೆಣ್ಣು ಮಗಳಿಗೆ ಕೆಲಸವೂ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಆ ಹೆಣ್ಣು ಮಗಳು ಎಷ್ಟು ನೊಂದಿರಬಹುದು.  ಈ ಸರ್ಕಾರಕ್ಕೆ ಯಾವ ಗಮನವೂ ಇರಲಿಲ್ಲ. ಆ ಮುಗ್ದ ಮಕ್ಕಳೂ ಸೇರಿ ಆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡ ಈ ಸರಕಾರ ಕೊಲೆಗಡುಕ ಸರ್ಕಾರ ಅಂದರೆ ತಪ್ಪಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ ಅವರು, ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಎಚ್‌ಡಿಕೆ ಟ್ವೀಟ್ : ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗೆಡುಕ ಸರಕಾರ’.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಇಲ್ಲಿ ಎದ್ದು ಕಾಣುತ್ತದೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ,  ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...