NEWSನಮ್ಮರಾಜ್ಯರಾಜಕೀಯ

ಜೆಡಿಎಸ್ ಕಾರ್ಯಕರ್ತರ ಪಕ್ಷ, ಇದು ದುರ್ಬಲ ಆಗಿಲ್ಲ ಪುಟಿದೇಳುತ್ತಿದೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜೆಡಿಎಸ್‌ ಪಕ್ಷದಲ್ಲಿ ಬೆಳೆದು ನಂತರ ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾವು ತಯಾರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಇದನ್ನು ಬಿಟ್ಟು ನಿಮ್ಮ ಗೊಂದಲ ಬಗೆ ಹಿರಿಸಿಕೊಳ್ಳಲು ಮುಂದಾಗಿ ಎಂದು ಸಲಹೆ ನೀಡಿದರು.

ನೀವೇ ಸ್ವತಃ ಗೊಂದಲ ಸೃಷ್ಟಿಸಿಕೊಂಡು ಬಹಿರಂಗ ಹೇಳಿಕೆ ಕೊಡುವುದು ಯಾಕೆ? ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬನ್ನಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

ನಮ್ಮ ಯಾವ ಶಾಸಕರು ಬಂದರು ಮುಕ್ತವಾಗಿ ನಾನು ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ನಮ್ಮ ಶಾಸಕರಿಗೆ ತೆರೆದಿರುತ್ತದೆ. ಆದರೆ, ನಮ್ಮ ಮೂರ್ನಾಲ್ಕು ಮಂದಿ ಶಾಸಕರು ಪಕ್ಷ ತೊರೆಯುವ ಮಾತನ್ನಾಡಿದ್ದಾರೆ. ಅವರ ಕ್ಷೇತ್ರಗಳಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಜೆಡಿಎಸ್ ಪುಟಿದೇಳುತ್ತಿದೆ : ಜೆಡಿಎಸ್ ಕಾರ್ಯಕರ್ತರ ಪಕ್ಷ. ಇದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದ ಅವರು, ಕಾಂಗ್ರೆಸ್ ನಿಂದಲೂ ಸಣ್ಣಪುಟ್ಟ ಜಾತಿಗಳ ಕಾರ್ಯಾಗಾರ ಆಯೋಜನೆ ನಡೆದಿದೆ.

ಕೆಲವರು ನಮ್ಮ ಪಕ್ಷ ನಿಷ್ಕ್ರಿಯ ಆಗಿಬಿಟ್ಟಿದೆ ಎಂದುಕೊಂಡಿದ್ದಾರೆ. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ಜೆಡಿಎಸ್‌ ಬಗ್ಗೆ ವ್ಯಂಗ್ಯವಾಡುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

ಯಾರನ್ನೂ ಪಕ್ಷ ಬಿಟ್ಟು ಹೋಗಿ ಅಂತ ನಾನು ಹೇಳಿಲ್ಲ. ಆದರೆ, ಪಕ್ಷ ತ್ಯಜಿಸಿ ಹೋದ ಮೇಲೆ ನಾನೇನು ಮಾಡಲು ಆಗುವುದಿಲ್ಲ. ಈ ಹಿಂದೆ‌ ಕೆಲವರು ಪಕ್ಷದ ಶಕ್ತಿ ಬಳಸಿಕೊಂಡು ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಟ್ಟು ಹೋದರು. ಇವರಿಂದಲೇ ಪಕ್ಷದ ಸಂಘಟನೆ ಮಾಡುವುದು ಹಿಂದೆ ಉಳಿಯಿತು ಎಂದು ಬೇಸರ ವ್ಯಕ್ತಪಡಿಸಿದರು.

ನಿನ್ನೆಯೂ ಒಬ್ಬ ಶಾಸಕರು ಹೇಳುತ್ತಿದ್ರು. ನಾನಾಗಿಯೇ ಪಕ್ಷ ಬಿಟ್ಟು ಹೋಗಲ್ಲ, ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂತ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುವುದನ್ನು ಬಿಡಿ.

ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗುತ್ತಾರೆ. ಇದನ್ನು ಬಿಟ್ಟು ಪಕ್ಷದ ಬಲವರ್ಧನೆಗೆ ಮುಂದಾಗಿ ಎಂದು ಕರೆ ನೀಡಿದ ಎಚ್‌ಡಿಕೆ, ನಾಯಕರಿಂದ ಪಕ್ಷ ಅಲ್ಲ, ಕಾರ್ಯಕರ್ತರಿಂದ ಪಕ್ಷ. ಕೆಲವರು ಪಕ್ಷಕ್ಕೆ ಕುತ್ತಿಗೆ ಕುಯ್ದು ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮಿಂದ ಯಾವುದೇ ಶಾಸಕರಿಗೆ ಅಪಚಾರವಾಗಿಲ್ಲ. ಪಕ್ಷ‌ ಬಿಡೋರು ಮೊದಲು ಆತ್ಮ ವಿಮರ್ಶೆ ಮಾಡಿಕೊಳ್ಳಲಿ. ನಮ್ಮ ಪಕ್ಷದ ಬಾಗಿಲು ಸದಾ ತೆರೆದಿದೆ. ಯಾವಾಗ ಬೇಕಾದರೂ ಚರ್ಚೆಗೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಾಗಾರ ಯಶಸ್ವಿ : ಅಲ್ಪಸಂಖ್ಯಾತರು ಯಾವ ರೀತಿ ಕೆಲಸ ಮಾಡಬೇಕು ಎಂಬುದನ್ನು ತಿಳಿಸಲಾಗುತ್ತದೆ. ವಿಜಯದಶಮಿ ಹಬ್ಬದ ನಂತರ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆ ಮಾಡುತ್ತೇವೆ. ಹದಿನಾರರ ನಂತರ ಎರಡನೇ ಹಂತದ ಕಾರ್ಯಾಗಾರ ಆರಂಭ ಮಾಡುತ್ತೇವೆ. ಎಲ್ಲ ಸಮುದಾಯಗಳಿಗೂ ಅವಕಾಶ ಕಲ್ಪಿಸಬೇಕು. ಅವರು ಜನರ ಹತ್ತಿರಕ್ಕೆ ಹೋಗಬೇಕು. ಅಂತವರಿಗೆ ಅವಕಾಶ ನೀಡುತ್ತೇವೆ ಎಂದು ಎಚ್ ಡಿಕೆ ತಿಳಿಸಿದರು.

ನಾಲ್ಕು ದಿನಗಳ ಕಾರ್ಯಾಗಾರ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಅದಕ್ಕೆ ಉತ್ತರ ನೀಡಿದ್ದೇನೆ. ಈ ಬಗ್ಗೆ ಮುಸ್ಲಿಂ ಕಾರ್ಯಾಗಾರದಲ್ಲಿ ಮಾತನಾಡುತ್ತೇನೆ. ಎಲ್ಲ ಸಮಾಜದವರಿಗೂ ಜೆಡಿಎಸ್ ಗೌರವ ನೀಡುತ್ತಿದೆ. ಈ ಸಮಾಜಕ್ಕೆ ನಾವು ಹಲವಾರು ಕೊಡುಗೆ ನೀಡಿದ್ದೇವೆ. ಮುಂದಿನ ಅಭ್ಯರ್ಥಿಗಳಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿದೆ ಎಂದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...