NEWSನಮ್ಮಜಿಲ್ಲೆರಾಜಕೀಯ

ಉಪಚುನಾವಣೆ ಮಾದರಿ ನೀತಿ ಸಂಹಿತೆ- ಕೋವಿಡ್ ನಿಯಮ ಉಲ್ಲಂಘಿಸಿದರೆ ಪ್ರಚಾರಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ರಾಜಕೀಯ ಪಕ್ಷಗಳು ಚುನಾವಣಾ ಮಾದರಿ ನೀತಿ ಸಂಹಿತೆ ಹಾಗೂ ಕೋವಿಡ್ ನಿಯಮಗಳ ಉಲ್ಲಂಘಿಸಿದರೆ ಆ ಸಮಯದಿಂದ ಯಾವುದೇ ಪ್ರಚಾರ ಮುಂದುವರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಪಕ್ಷಗಳ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಳಕೆ ಮಾಡುವ ವಿದ್ಯುನ್ಮಾನ ಮತಯಂತ್ರಗಳ ಮೊದಲ ಹಂತದ ಸಮ್ಮಿಶ್ರಿಕರಣ (ರ‍್ಯಾಂಡಮೈಜೇಷನ್) ನಡೆಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಪಾರದರ್ಶಕ ಹಾಗೂ ಮುಕ್ತ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷದ ಮುಖಂಡರು ಚುನಾವಣೆ ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ತಿಳಿಸಿದರು.

ಚುನಾವಣಾ ವೆಚ್ಚವಾಗಿ ಪ್ರತಿ ಅಭ್ಯರ್ಥಿಗೆ ರೂ.30.80 ಲಕ್ಷ ನಿಗಧಿಪಡಿಸಲಾಗಿದೆ. ಈಗಾಗಲೇ ಪ್ರಚಾರ ಸಾಮಗ್ರಿಗಳು, ವಾಹನ, ಜಾಹೀರಾತು ಸೇರಿದಂತೆ ಎಲ್ಲ ಪರಿಕರಿಗಳಿಗೂ ದರ ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ದರವನ್ನು ಅನ್ವಯಿಸಿ ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಭ್ಯರ್ಥಿ ಸೇರಿ ಮೂರು ಜನರಿಗೆ ಮಾತ್ರ ಅವಕಾಶವಿದೆ. ಬೈಕ್, ಸೈಕಲ್ ರ್ಯಾಲಿ ಮತ್ತು ರೋಡ ಶೋಗೆ ಅವಕಾಶ ಇರುವುದಿಲ್ಲ. ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಐದು ಜನರಿಗೆ ಮಾತ್ರ ಅವಕಾಶವಿದೆ. ಒಳಾಂಗಣ ಪ್ರದೇಶದಲ್ಲಿ ಸಭೆ-ಸಮಾರಂಭ ನಡೆಸಲು ಸಭಾಂಗಣದ ಆಸನ ಸಾಮಥ್ರ್ಯದ ಶೇ.30ರಷ್ಟು ಅಥವಾ ಗರಿಷ್ಠ 200 ಜನರಿಗೆ ಮಾತ್ರ ಅವಕಾಶವಿದೆ.

ಹೊರಾಂಗಣ ಮೈದಾನ ಅಥವಾ ಕ್ರೀಡಾಂಗಣದಲ್ಲಿ ಸಭೆ-ಸಮಾರಂಭ ನಡೆಸಲು ಪ್ರದೇಶ ಸಾಮಥ್ರ್ಯದ ಶೇ.50 ರಷ್ಟು ಅಥವಾ ಗರಿಷ್ಠ ಒಂದು ಸಾವಿರ ಜನರಿಗೆ ಅವಕಾಶವಿದೆ. ಬೀದಿಗಳಲ್ಲಿ ಪ್ರಚಾರ ನಡೆಸಲು ಹಾಗೂ ವಿಡಿಯೋ ಪ್ರದರ್ಶನ ವಿಕ್ಷೀಸಲು ಕೇವಲ 50 ಜನ ಸೇರು ಅವಕಾಶವಿದೆ. ಈ ಎಲ್ಲದಕ್ಕೂ ಪೂರ್ವಾನುಮತಿ ಪಡೆಯಬೇಕು ಎಂದು ಮುಖಂಡರಿಗೆ ಮಾಹಿತಿ ನೀಡಿದರು.

ಪಕ್ಷದ ಅಭ್ಯರ್ಥಿ ಸೇರಿ ಗರಿಷ್ಠ 20 ವಾಹನಗಳಿಗೆ ಅವಕಾಶ ಕಲ್ಪಿಸಲಾಗುವುದು. ಮತದಾನ ದಿನ ಎರಡು ವಾನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಈ ವಾಹನದ ಆಸನ ಸಾಮರ್ಥ್ಯದ ಶೇ.50 ರಷ್ಟು ಜನ ಮಾತ್ರ ಪ್ರಯಾಣಿಸಬಹುದು. ಮತದಾನ ಆರಂಭದ 72 ಗಂಟೆ ಮುಂಚಿತವಾಗಿ ಮೌನ ಅವಧಿ ಎಂದು ಘೋಷಣೆ ಮಾಡಲಾಗಿದೆ. ಚುನಾವಣಾ ಹಾಗೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸುಗಮ ಚುನಾವಣೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಹಾನಗಲ್ ಕ್ಷೇತ್ರದಲ್ಲಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಹಾಗೂ ವಿವಿ ಪ್ಯಾಟ್‍ಗಳ ಮೊದಲ ಹಂತದ ರ್ಯಾಂಡಮೈಜೇಷ್ ಇಂದು ಮಾಡಲಾಗಿದೆ. ಹಾನಗಲ್‍ನಲ್ಲಿ ಎರಡನೇ ಹಂತದ ರ‍್ಯಾಂಡಮೈಜೇಷನ್ ನಡೆಯಲಿದೆ.

ಮತಗಟ್ಟೆ ಅಧಿಕಾರಿಗಳಿಗೆ ಅಕ್ಟೋಬರ್ 16 ರಂದು ಮೊದಲ ಹಂತದ ತರಬೇತಿ ಬ್ಯಾಡಗಿ, ಹಾವೇರಿ ಹಾಗೂ ಹಾನಗಲ್‍ನಲ್ಲಿ ನಡೆಯಲಿದೆ. ಎರಡನೇ ಹಂತದ ತರಬೇತಿ ಅಕ್ಟೋಬರ್ 24 ಹಾಗೂ 25 ರಂದು ಹಾನಗಲ್‍ನಲ್ಲಿ ನಡೆಯಲಿದೆ ಎಂದು ಹೇಳಿದರು.

ಅಕ್ಟೋಬರ್ 29 ರಂದು ಮಸ್ಟರಿಂಗ್ ಹಾಗೂ ಅಕ್ಟೋಬರ್ 30 ರಂದು ಡಿಮಸ್ಟ್‍ರಿಂಗ್ ಹಾನಗಲ್ ಪಟ್ಟಣದ ಕುಮಾರಸ್ವಾಮಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ಹಾವೇರಿ ನಗರದ ಸರ್ಕಾರಿ ಇಂಜನೀಯರಿಂಗ್ ಕಾಲೇಜಿನಲ್ಲಿಜರುಗಲಿದೆ ಎಂದು ತಿಳಿಸಿದರು.

ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳಲ್ಲಿ ಚಲನವಲನಗಳ ನಿಗಾವಹಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಸೀಲ್ದಾರ್‌ ಗಿರೀಶ ಸ್ವಾದಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ರಾಜಕೀಯ ಪಕ್ಷಗಳ ವಿವಿಧ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು