NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ವೇತನ ವಿಳಂಬ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಸರಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ಆಗ್ರಹ ಮಾಡಿದ್ದಾರೆ.

ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎಂದರೆ ಸರಕಾರ ಇರುವುದಾದರೂ ಏತಕ್ಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅಂಥ ಕಾರ್ಮಿಕರನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.

ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು  ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC