CrimeNEWSವಿಡಿಯೋ

ಬಿಎಂಟಿಸಿಯ 6ನೇ ಘಟಕದ ನೌಕರ ಘಟಕದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ- ಆಸ್ಪತ್ರೆಗೆ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಷ್ಕರದ ವೇಳೆ ವಜಾಗೊಂಡಿದ್ದ ಬಿಎಂಟಿಸಿಯ 6ನೇ ಘಟಕದ ನೌಕರನೊಬ್ಬ ಘಟಕದಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ (ಇಂದು) ಬೆಳಗ್ಗೆ 10ಗಂಟೆ ಸುಮಾರಿನಲ್ಲಿ ನಡೆದಿದೆ.

ಬಿಎಂಟಿಸಿ 6ನೇ ಘಟಕದ ಚಾಲಕ ಕೇಶವ ಎಂಬುವರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವವರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್‌ನಲ್ಲಿ ಮುಷ್ಕರ ನಡೆಸುತ್ತಿದ್ದ ವೇಳೆ ನೌಕರರ ಮೇಲೆ ಯಾವುದೇ ಕಾರಣ ನೀಡದೆ ಅಮಾನುಷವಾಗಿ ನಡೆದುಕೊಂಡಿರುವ ಸಾರಿಗೆ ಆಡಳಿತ ವರ್ಗ ಏಕಾಏಕಿ ವಜಾ, ಅಮಾನತು, ವರ್ಗಾವಣೆ ಸೇರಿದಂತೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿ ಇನ್ನಿಲ್ಲ ಕಿರುಕುಳವನ್ನು ನೀಡುತ್ತಿದೆ.

ಇದರಿಂದ ಮನನೊಂದ ಅದೆಷ್ಟೋ ನೌಕರರು ಈಗಾಗಲೇ ಜೀವವನ್ನು ಕಳೆದುಕೊಂಡಿದ್ದಾರೆ. ಆದರೂ ಅಧಿಕಾರಿಗಳಿಗೆ ನೌಕರರ ಮೇಲೆ ಕಿಂಚಿತ್ತು ಕಾಳಜಿ ಇಲ್ಲದಂತಾಗಿದೆ.

ಹೀಗಾಗಿ ಇಂದು ಕೂಡ ಚಾಲಕ ಕೇಶವ ಅಧಿಕಾರಿಗಳ ಕಿರುಕುಳ ನಡೆಯಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಾಲಗಿದೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ