NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ (ಅ.8) ಬೀಡನಹಳ್ಳಿಯಲ್ಲಿ ತಾಯಿ ಚಾಮುಂಡೇಶ್ವರಿ ಹಬ್ಬದ ಸಂಭ್ರಮ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಪ್ರತಿ ವರ್ಷದಂತೆ ಈ ವರ್ಷವು (ಅ.8) ಶುಕ್ರವಾರ ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷ ನಾಳೆ ಹಬ್ಬ ಆಚರಣೆ ಮಾಡಲಾಗುತ್ತಿದೆ.

ಬೀಡನಹಳ್ಳಿಯಲ್ಲಿ ಚಾಮುಂಡೇಶ್ವರಿ ಹಬ್ಬದ ಅಂಗವಾಗಿ ಕಳೆದ ಶುಕ್ರವಾರ ಗಂಗೆ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನಾ 3-4ದಿನಗಳಿಂದ ಗ್ರಾಮಸ್ಥರು ಮನೆಯನ್ನು ಸ್ವಚ್ಛಗೊಳಿಸುವ ಸುಣ್ಣ-ಬಣ್ಣ ಬಳಿಯುವ ಮೂಲಕ ಮನೆಯಲ್ಲಿ ಹಬ್ಬದ ವಾತಾವರಣವನ್ನು ಹೆಚ್ಚಿಸಿದರು.

ಇನ್ನು ಹಬ್ಬದ ಅಂಗವಾಗಿ ನಾಳೆ ಗ್ರಾಮದ ಹೆಂಗಳೆಯರು ತಂಬಿಟ್ಟಿನ ಆರತಿಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನೆರವೇರಿಸುವರು. ಈ ವೇಳೆ ಬಂಧು ಬಳಗ, ಸ್ನೇಹಿತರು ಸೇರಿದಂತೆ ಆಪ್ತರನ್ನು ಹಬ್ಬಕ್ಕೆ ಆಹ್ವಾನಿಸುವುದು ರೂಡಿ.

ಆದರೆ, ಇತ್ತೀಚಿನ ದಿನಗಳಲ್ಲಿ ಹಬ್ಬಕ್ಕೆ ಹೆಣ್ಣುಮಕ್ಕಳು ಮತ್ತು ಹೊಸ ಸಂಬಂಧಿಕರಿಗಷ್ಟೇ ಆಹ್ವಾನ ನೀಡುವುದು ಸಮಾನ್ಯವಾಗಿದೆ.

ಇಂದು ಅ.8ರಂದು ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಭೂಪ, ಸಮೇತ ಮಾರಮ್ಮ, ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳ ಮೂಲಕ ಮೆರವಣಿಗೆ ಮಾಡಿ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಆಗಮಿಸಿ ಪೂಜೆ ನೆರವೇರಿಸಲಾಗುವುದು.

ಇದಕ್ಕೂ ಮುನ್ನಾ ಬನ್ನೂರು ಹೆಗ್ಗೆರೆಯಿಂದ ಮತ್ತೆ ಹೂ ಹೊಂಬಾಳೆಯಾಗಿ ಬರುವ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಪೂಜೆಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ತೀರ್ಥ ಪ್ರೊಷಕ್ಷಣೆ ಮಾಡಿದ ಬಳಿಕ ದೇವಿಗೆ ಪೂಜೆ ನೆರವೇರಿಸಲಾಗುವುದು.

ಪ್ರತಿ ವರ್ಷ ಗ್ರಾಮದ ಯುವಕರು ನಾಡಿನ ದೇವತೆ ಹಬ್ಬದಂದು ಮನರಂಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದರು. ಆದರೆ, ಈ ಬಾರಿ ಕೊರೊನಾ ಮಹಾಮಾರಿಯಿಂದ ಯಾವುದೇ ನಾಟಕ, ಮನರಂಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನು ಗ್ರಾಮವನ್ನು  ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನ ಮತ್ತು ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಗಳು ಜಗಮಗಿಸುತ್ತಿವೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ