NEWSನಮ್ಮರಾಜ್ಯರಾಜಕೀಯ

ದಸರಾ ಹಬ್ಬಕ್ಕೂ ಮುನ್ನ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಡುವ ಭರವಸೆ ಕೊಟ್ಟ ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಸಮಯದಲ್ಲಿ ಮಾಡಿರುವ ನೌಕರರ ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್ ಪ್ರಕರಣಗಳನ್ನು ಅತೀ ಶೀಘ್ರದಲ್ಲೇ ಹಿಂಪಡೆಯಲಾಗುವುದು ಎಂದು ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಇಂದು (ಅ.8) ನಡೆದ ನಾಲ್ಕೂ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಬೋರ್ಡ್‌ ಮೀಟಿಂಗ್‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸದಲ್ಲಿ ಇರುವುದರಿಂದ ಅವರು ಬಂದ ಕೂಡಲೇ ಬೋರ್ಡ್‌ ಮೀಟಿಂಗ್‌ನಲ್ಲಿ ತೆಗೆದುಕೊಂಡಿರುವ ತೀರ್ಮಾನದ ಬಗ್ಗೆ ತಿಳಿಸುವ ಮೂಲಕ ನೌಕರರ ಸಮಸ್ಯೆಯನ್ನು ನಿವಾರಿಸುವ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಇನ್ನು ಪ್ರಮುಖವಾಗಿ ಕೆಲ ಪೊಲೀಸ್‌ ಪ್ರಕರಣಗಳನ್ನು ಹೊರತು ಪಡಿಸಿ ಉಳಿದ ಎಲ್ಲ ನೌಕರರನ್ನು ಮತ್ತೆ ವಾಪಸ್‌ ತೆಗೆದುಕೊಳ್ಳುವ ಮೂಲಕ ನೌಕರರಿಗೆ ದಸರಾ ಹಬ್ಬಕ್ಕೂ ಮುನ್ನ ಸಿಹಿಸುದ್ದಿ ನೀಡುವುದಾಗಿ ನಂದೀಶ್‌ ರೆಡ್ಡಿ ಭರವಸೆ ನೀಡಿದ್ದಾರೆ.

ಇನ್ನು ನೌಕರರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಬೋರ್ಡ್‌ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆ ಆಗಿದ್ದು, ನೌಕರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲೂ ಅತೀ ಶೀಘ್ರದಲ್ಲೇ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ