NEWSಕೃಷಿನಮ್ಮರಾಜ್ಯ

ರಾಜ್ಯಾದ್ಯಂತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ಮನೆಗಳಿಗೆ ನುಗ್ಗಿದ ನೀರು,ಅಪಾರ ಪ್ರಮಾಣದ ಬೆಳೆ ನಷ್ಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿರುವುದು ಮುಂದಿನ 5ದಿನಗಳ ಕಾಲ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಮುಂದುವರಿದೆ. ಇದರಿಂದ ಜಮೀನು, ಮನೆಗಳಿಗೆ ನೀರು ನುಗ್ಗಿ ಜನರು ಆತಂಕಪಡುವ ಪರಿಸ್ಥಿತಿಯುಂಟಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ.

ಮೈಸೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ರಾಯಚೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿದೆ.

ಬೆಂಗಳೂರು ನಗರದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.

ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ ಪಾತ್ರಗಳಲ್ಲಿರುವ ಮತ್ತು ತಗ್ಗು ಪ್ರದೇಶಗಳಲ್ಲಿರುವ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದಾಗಿ ಜಿಲ್ಲೆಯ ಶರಾವತಿ, ತುಂಗಾ, ವರದಾ, ಕುಮದ್ವತಿ, ಮಾಲತಿ, ದಂಡಾವತಿ ಸೇರಿದಂತೆ ಇತರೆ ನದಿಗಳು ತುಂಬಿ ತುಳುಕುತ್ತಿವೆ.

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಕಾವೇರಿ ಮತ್ತು ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿವೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು