NEWSನಮ್ಮರಾಜ್ಯರಾಜಕೀಯ

ಆಮ್‌ ಆದ್ಮಿ ಪಾರ್ಟಿಗೆ ʻವಕೀಲ್‌ ಸಾಬ್‌ʼ ಜಗದೀಶ್ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್‌ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್‌.ಜಗದೀಶ್‌ ಮಹಾದೇವ್‌ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಸುಮಾರು ಹತ್ತು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ ಸಂದರ್ಭಗಳಲ್ಲಿ ಕಾರ್ಮಿಕರು, ರೈತರು ಹಾಗೂ ಯುವಜನತೆಯ ನ್ಯಾಯಯುತ ಹೋರಾಟಕ್ಕೆ ಬೆಂಬಲವಾಗಿ ನಿಂತ ತೃಪ್ತಿಯಿದೆ.

ನನ್ನಂತೆಯೇ ಎಎಪಿ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದು, ಪಕ್ಷ ಸೇರ್ಪಡೆಯಿಂದ ನನ್ನ ಹೋರಾಟದ ಶಕ್ತಿ ಹೆಚ್ಚಾಗಲಿದೆ. ಪಕ್ಷಕ್ಕೂ ನನ್ನಿಂದ ಅನುಕೂಲವಾಗುವ ದೃಢ ವಿಶ್ವಾಸವಿದೆ ಎಂದು ಹೇಳಿದರು.

ದೆಹಲಿಯ ಕೇಜ್ರಿವಾಲ್‌ ಸರ್ಕಾರವು ಜನಪರ ಆಡಳಿತ ನೀಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಜನವಿರೋಧಿ ಆಡಳಿತ ನೀಡುತ್ತಿದೆ. ಕೇಜ್ರಿವಾಲ್‌ ಆಡಳಿತದಲ್ಲಿ ಕುಡಿಯುವ ನೀರು, ವಿದ್ಯುತ್‌, ವೈದ್ಯಕೀಯ ಸೌಲಭ್ಯ ಮುಂತಾದವುಗಳು ಒಂದು ಮಿತಿಯವರೆಗೆ ಉಚಿತವಾಗಿ ಸಿಗುತ್ತಿದೆ.

ಆದರೆ ಮೋದಿ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆಯನ್ನು ಮನಬಂದಂತೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರನ್ನು ಹೈರಾಣಾಗಿಸುತ್ತಿದೆ. ಇದರ ವಿರುದ್ಧ ಹೋರಾಡಲು ಯುವಜನತೆ ಮುಂದಾಗಬೇಕು. ಭ್ರಷ್ಟ ಹಾಗೂ ಕೋಮುವಾದಿ ನಾಯಕರುಗಳೇ ತುಂಬಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಪ್ರತಿಜ್ಞೆ ಮಾಡಬೇಕು ಎಂದು ಜಗದೀಶ್‌ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಮಾತನಾಡಿ, “ಒಳ್ಳೆಯ ಜನರು ಒಗ್ಗೂಡಿದರೆ ಸಾಮಾನ್ಯರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಬಹುದು ಎಂಬುದನ್ನು ದೆಹಲಿ ರಾಜಕೀಯವು ನಮಗೆ ತೋರಿಸಿದೆ.

ದಶಕಗಳಿಂದ ನಮ್ಮ ರಾಜ್ಯದಲ್ಲಿ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ವಿವಿಧ ಸಮಸ್ಯೆಗಳು ಮತ್ತು ಅನ್ಯಾಯದ ವಿರುದ್ಧ ಪ್ರತ್ಯೇಕವಾಗಿ ಹೋರಾಡುತ್ತಿವೆ. ದೊಡ್ಡ ಪ್ರಮಾಣದ ಬದಲಾವಣೆ ತರಲು ಅಂಥವರೆಲ್ಲರೂ ಒಟ್ಟಾಗಿ ಸೇರುವ ಸಮಯ ಈಗ ಬಂದಿದೆ.

ʻವಕೀಲ್ ಸಾಬ್‌ʼ ಎಂದು ಪ್ರೀತಿಯಿಂದ ಕರೆಯಲ್ಪಡುವ ಕೆ.ಎನ್‌.ಜಗದೀಶ್‌ ಅವರು ಸಾಮಾನ್ಯ ಜನರಿಗಾಗಿ ಧೈರ್ಯದಿಂದ ಹೋರಾಡಿ ರಾಜ್ಯಾದ್ಯಂತ ಜನರ ಹೃದಯ ಗೆದ್ದಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ.

ಕೆ.ಎನ್.ಜಗದೀಶ್‌ ಅವರಿಗೆ ಅನೇಕ ಹಿತೈಷಿಗಳು ಮತ್ತು ಅಪಾರ ಅನುಯಾಯಿಗಳಿರುವುದು ನಮ್ಮ ಧ್ವನಿಯನ್ನು ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ಪಕ್ಷದ ಸಂದೇಶವನ್ನು ನಮ್ಮ ರಾಜ್ಯದ ಮೂಲೆಮೂಲೆಗೂ ತಲುಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಅಧ್ಯಕ್ಷ ಮೋಹನ್‌ ದಾಸರಿ, ಹಿರಿಯ ಮುಖಂಡರಾದ ಲಕ್ಷ್ಮೀಕಾಂತ ರಾವ್‌, ನಂಜಪ್ಪ ಕಾಳೇಗೌಡ, ಕುಶಲಸ್ವಾಮಿ, ಉಷಾ ಮೋಹನ್‌, ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌, ಜಗದೀಶ್‌ ವಿ. ಸದಂ ಹಾಗೂ ಇತರೆ ಮುಖಂಡರು ಮತ್ತು ಜಗದೀಶ್‌ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು