NEWSನಮ್ಮರಾಜ್ಯರಾಜಕೀಯ

ರಾಜ್ಯ ಬಿಜೆಪಿ ಸರ್ಕಾರದಿಂದ ಕನ್ನಡಕ್ಕೆ ಕುತ್ತು- ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ: ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ
  • ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ
  • ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು.

ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಿಂದಿ ಭಾಷೆ ಇರಬೇಕಾದ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇದು ಕನ್ನಡರಿಗೆ ಮತ್ತು ಕನ್ನಡ ಭಾಷೆಗೆ ಮಾಡುತ್ತಿರುವ ಅಪಮಾನ.

ಇಂಥ ಭಾಷಾಭಿಮಾನ ಇಲ್ಲದ ಸರ್ಕಾರದ ಜವಾಬ್ದಾರಿ ಹೊತ್ತವರಿಗೆ ಧಿಕ್ಕಾರ. ಇನ್ನೊಬ್ಬರ ಹಂಗಿನಲ್ಲೇ ಉಸಿರಾಡುವ ರಾಜ್ಯ ಬಿಜೆಪಿ ನಾಯಕರಿಗೆ ಸ್ವಲ್ಪವೂ ನಾಚಿಕೆಯೇ ಆಗುತ್ತಿಲ್ಲ. ಹುಟ್ಟಿ ಬೆಳೆದಿರುವ ನಾಡಿಗೆ ದ್ರೋಹ ಬಗೆಯುತ್ತಿರುವ ಇವರಿಗೆ ಮುಂದಿನ ದಿನಗಳಲ್ಲಿ ಕನ್ನಡಿಗರೇ ತಕ್ಕ ಪಾಠ ಕಲಿಸಬೇಕಿದೆ.

ಹೌದು ಈ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಅವರು ಸರಣಿ ಟ್ವೀಟ್‌ ಮಾಡುವ ಮೂಲಕ ಸರ್ಕಾರದ ನಡೆಗೆ ಧಿಕ್ಕಾರ ಹೇಳಿದ್ದಾರೆ. ಅವರು ಹೇಳಿರುವುದು ಇಲ್ಲಿದೆ…

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ?

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ?

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ?

ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಮಾಜಿ ಸಿಎಂ ಎಚ್‌ಡಿಕೆ ಕರೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ