Friday, November 1, 2024
NEWSದೇಶ-ವಿದೇಶರಾಜಕೀಯ

ಕರ್ನಾಟಕ ಸೇರಿ, ಏಳು ಹೈಕೋರ್ಟ್ ನ್ಯಾ ಯಮೂರ್ತಿಗಳ ವರ್ಗಾವಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು/ನ್ಯೂಡೆಲ್ಲಿ: ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರನ್ನು ಪಾಟ್ನಾ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಕೊಲಿಜಿಯಂ ಸೆಪ್ಟೆಂಬರ್ 21 ರಂದು ಈ ವರ್ಗಾವಣೆಗಳಿಗೆ ಶಿಫಾರಸು ಮಾಡಿತ್ತು.

ಅಕ್ಟೋ ಬರ್ 5 ರಂದು 11 ಹೈಕೋರ್ಟ್ಗಳ 15 ನ್ಯಾಯಮೂರ್ತಿಗಳನ್ನು ವರ್ಗಾವಣೆಮಾಡಲಾಗಿತ್ತು . ಈಗ ಒಂದೇ ವಾರದಲ್ಲಿ ಎರಡನೇ ಬಾರಿ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆಮಾಡಲಾಗಿದೆ.
ವರ್ಗಾವಣೆಗೊಂಡ ನ್ಯಾಯಮೂರ್ತಿಗಳ ಪಟ್ಟಿಯನ್ನು ಕಾನೂನು ಸಚಿವಾಲಯ ಟ್ವೀಟ್‌ಮಾಡಿದೆ.

ಆ ಪ್ರಕಾರ, ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ , ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿ ರಾಜನ್ ಗುಪ್ತಾ ಹಾಗೂ ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರನ್ನು ಪಾಟ್ನಾ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ.

ಈಮೂಲಕ ಇತ್ತೀಚೆಗಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಟ್ನಾ ನ್ಯಾಯಾಲಯಕ್ಕೆ ಮೂವರು ಹೊಸ ನ್ಯಾಯಮೂರ್ತಿಗಳು ದೊರೆತಂತಾಗಿದೆ.

ಉಳಿದಂತೆ, ನ್ಯಾ ಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರನ್ನು ಮದ್ರಾಸ್ ಹೈಕೋರ್ಟ್ನಿಂದ ಕೊಲ್ಕತ್ತಾ ಹೈಕೋರ್ಟ್ಗೆ ವರ್ಗಾವಣೆಮಾಡಲಾಗಿದೆ.

ಅದೇ ರೀತಿ, ಹಿಮಾಚಲ ಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿ ಸುರೇಶ್ವರ್ ಠಾಕೂರ್ ಅವರನ್ನು ಪಂಜಾಬ್ ಮತ್ತು ಹರಿಯಾಣಕ್ಕೆ, ತೆಲಂಗಾಣ ಹೈಕೋರ್ಟ್ನನ್ಯಾ ಯಮೂರ್ತಿ ಟಿ. ಅಮರನಾಥ ಗೌಡ್ ಅವರನ್ನು ತ್ರಿಪುರಾಕ್ಕೆ ಕಳುಹಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಸುಭಾಷ್ಚಂದ್ ಅವರನ್ನು ಜಾರ್ಖಂ ಡ್ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...