NEWSನಮ್ಮರಾಜ್ಯರಾಜಕೀಯ

ನಾನು-ಬಿಎಸ್‌ವೈ ಭೇಟಿ ಸಾಬೀತುಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ ಸವಾಲ್‌

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದನ್ನು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರ 76ನೇ ಜನ್ಮ ದಿನದಂದು ಮಾತ್ರ ನಾನು ಖುದ್ದಾಗಿ ಭೇಟಿಮಾಡಿದ್ದೇನೆ.

ನಂತರ ಸದನದಲ್ಲಿ ಮುಖಾಮುಖಿಯಾಗಿದ್ದೇವೆ. ಇದನ್ನು ಹೊರತು ಪಡಿಸಿ ವೈಯಕ್ತಿಕವಾಗಿ ನಾನು ಯಡಿಯೂರಪ್ಪ ನವರನ್ನು ಭೇಟಿಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ವಿಪಕ್ಷದಲ್ಲಿ ಇದ್ದಾಗ ಆಡಳಿತ ಪಕ್ಷದವರ ಮನೆ, ಕಚೇರಿಗೆ ಹೋಗಿಲ್ಲ. ಇಷ್ಟು ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಯಾರ ಮನೆಗೂಹೋಗಿಲ್ಲ . ಕುಮಾರಸ್ವಾಮಿ ಹಾಗೆ ಭೇಟಿಮಾಡುವ ಗಿರಾಕಿ ಎಂದು ವ್ಯಂಗ್ಯ ವಾಡಿದರು.

ಇನ್ನು ಯಡಿಯೂರಪ್ಪ ಆಪ್ತರಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿಗೆ ನನ್ನ ಭೇಟಿ ಕಾರಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಸರ್ಕಾರ ನಡೆಸುವವರು ಯಾರು? ಮೋದಿ, ಯಡಿಯೂರಪ್ಪ ಮತ್ತು ಐಟಿ ದಾಳಿಗೊಳಗಾದ ಆಪ್ತರು ನಮ್ಮ ಪಕ್ಷದವರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕನಾಗಲು ಸರ್ಕಾರ ಕೆಡವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಾಗಿದ್ದರೆ ಜೆಡಿಎಸ್ ನ ಮೂವರೂ ಶಾಸಕರೂ ಬಿಜೆಪಿಗೆ ಹೋದರಲ್ಲ. ಅದರ ಬಗ್ಗೆ ಏನು ಹೇಳುತ್ತಾರೆ? ಅವರನ್ನೂ ನಾನೇ ಬಿಜೆಪಿಗೆ ಕಳಿಸಿದೆನಾ? ಎಂದು ಪ್ರಶ್ನಿಸಿದರು.

ಪುಟಗೋಸಿ ವಿಪಕ್ಷದ ನಾಯಕ ನಾಗಲು ಸರ್ಕಾರ ಕೆಡವಿದೆ ಎಂದು ಆರೋಪಿಸಿದ್ದಾರೆ. ಒಂದು ಸಂವಿಧಾನಾತ್ಮಕ ಹುದ್ದೆಯನ್ನು ಮುಖ್ಯಮಂತ್ರಿ ಆಗಿದ್ದವರು ಇಷ್ಟೊಂದು ಕೀಳಾಗಿ ನೋಡಿದರೆ ಹೇಗೆ?

ಅವರ ತಂದೆ ಎಚ್.ಡಿ. ದೇವೇಗೌಡ ಅವರು ದೇವರಾಜ ಅರಸು ಅವರು ಮುಖ್ಯ ಮಂತ್ರಿಯಾಗಿದ್ದಾಗ ವಿಪಕ್ಷದ ನಾಯಕರಾಗಿದ್ದರು. ಹಾಗಿದ್ದರೆ ಅವರೂ ಪುಟಗೋಸಿನಾ ಎಂದು ಹರಿಹಾಯ್ದರು.

Leave a Reply

error: Content is protected !!
LATEST
APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ