ನ್ಯೂಡೆಲ್ಲಿ: ಅಪೌಷ್ಟಿಕತೆ ನಿವಾರಣೆಗಾಗಿ ಶ್ರಮಿಸುತ್ತಿರುವ 116 ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ರಾಷ್ಟ್ರಗಳಿಂದ ಹಿಂದುಳಿದಿದೆ.
ಜಾಗತಿಕ ಹಸಿವು ಸೂಚ್ಯಂಕ 2021ರ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ನೆರೆಯ ರಾಷ್ಟ್ರಗಳಾದ ನೇಪಾಳ 76, ಬಾಂಗ್ಲಾದೇಶ 76, ಮ್ಯಾನ್ಮಾರ್ 71 ಮತ್ತು ಪಾಕಿಸ್ತಾನ 92ನೇ ರ‍್ಯಾಂ ಕ್ ಪಡೆದಿವೆ.
ಚೀನಾ, ಬ್ರೆಜಿಲ್ ಮತ್ತು ಕುವೈತ್ ಸೇರಿದಂತೆ 18 ರಾಷ್ಟ್ರಗಳುಮೊದಲ ಸ್ಥಾನವನ್ನು ಹಂಚಿಕೊಂಡಿವೆ. ಆದರೆ ಭಾರತ 101ನೇ ರ‍್ಯಾಂಕ್‌ಗೆ ಕುಸಿದಿರುವುದು ಕಳವಳಕಾರಿಯಾಗಿದೆ. ಕಳೆದ ವರ್ಷ 107 ರಾಷ್ಟ್ರಗಳ ಪೈಕಿ 94ನೇ ಸ್ಥಾನದಲ್ಲಿತ್ತು.
ಜಾಗತಿಕ ಹಸಿವುಸೂಚ್ಯಂ ಕ(ಜಿಎಚ್ಐ) ರಾಷ್ಟ್ರ ಗಳಲ್ಲಿನ ಹಸಿವಿನ ಮತ್ತು ಅಪೌಷ್ಟಿ ಕತೆಯ ಪ್ರಮಾಣವನ್ನು ಅಧ್ಯಯನ ಮಾಡಿ ಅಂಕ ನೀಡುತ್ತದೆ. ಐರ್ಲೆಂಡ್‌ನ ಧನ ಸಹಾಯ ಹೊಂದಿರುವ ಏಜೆನ್ಸಿ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನಿಯ ಸಂಸ್ಥೆ ವೆಲ್ಟ್ ಹಂಗರ್ ಹೆಲ್ಪ್ ಸಹಯೋಗದಲ್ಲಿ ಈ ಪಟ್ಟಿ ಯನ್ನು ಸಿದ್ಧ ಪಡಿಸಲಾಗಿದೆ.
ವಿಶ್ವ ದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ. 2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕಹೊಂದಿರದ ಮಕ್ಕಳ ಪ್ರಮಾಣ ಶೇ. 17.3 ಇದೆ. 1998-2002ರ ನಡುವೆ ಈ ಪ್ರಮಾಣ ಶೇ. 17.1 ಇತ್ತು ಎಂದು ಜಿಎಚ್ಐ ವರದಿ ಹೇಳಿದೆ.
ಕೋವಿಡ್-19 ಸೋಂಕು ಮತ್ತು ತಡೆಗಟ್ಟುವ ನಿಟ್ಟಿನಲ್ಲಿ ಹೇರಲಾದ ಲಾಕ್ಡೌನ್, ಕರ್ಫ್ಯೂ ಗಳಂತಹ ಕಠಿಣ ಕ್ರಮಗಳು ಹಸಿವಿನ ಸೂಚ್ಯಂಕದಲ್ಲಿ ಭಾರತ ಕಳಪೆ ಸಾಧನೆ ಮಾಡಲು ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.