NEWSದೇಶ-ವಿದೇಶರಾಜಕೀಯ

ಗಡಿ ವಿವಾದದಲ್ಲಿ ಚೀನಾ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ: ಭಾರತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರ ಣ ರೇಖೆಯ (ಎಲ್ಎಸಿ) ಬಳಿ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಭಾರತ– ಚೀನಾ ಮಿಲಿಟರಿ ಮಾತುಕತೆ ವಿಫಲವಾದ ಬೆನ್ನಲ್ಲೇ ಉಳಿದ ಎಲ್ಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಚೀನಾ ಕೆಲಸ ಮಾಡುವ ನಿರೀಕ್ಷೆ ಇದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.

13ನೇ ಸುತ್ತಿನ ಮಿಲಿಟರಿ ಮಾತುಕತೆಯ ಸಂದರ್ಭದಲ್ಲಿ ಗಡಿ ವಿವಾದ ಬಗೆಹರಿಸಿಕೊಳ್ಳಲು ಭಾರತ ರಚನಾತ್ಮಕ ಸಲಹೆಗಳನ್ನು ಮುಂದಿಟ್ಟಿತ್ತು.

ಆದರೆ, ಚೀನಾ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ದ್ವಿಪಕ್ಷೀ ಯ ಒಪ್ಪಂದಗಳು ಮತ್ತು ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಅನುಸರಿಸುವ ಮೂಲಕ ಚೀನಾವು ಪೂರ್ವ ಲಡಾಖ್‌ನಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳನ್ನು ಶೀಘ್ರ ಪರಿಹರಿಸಲಿದೆ ಎಂದು ನಾವು ನಿರೀಕ್ಷಿ ಸುತ್ತೇವೆ ಎಂದು ಬಾಗ್ಚಿ ಹೇಳಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ಉಂಟಾಗಿದ್ದ ಸಂಘರ್ಷದ ನಂತರ ಭಾರತ –ಚೀನಾ ಉಭಯ ರಾಷ್ಟ್ರಗಳ ನಡುವೆ ಅ.9ರಂದು 13ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿತ್ತು.

ಪೂರ್ವ ಲಡಾಖ್‌ನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಚೀನಾದ ಬದಿಯ ಚುಶುಲ್-ಮೊಲ್ಡೊ ಗಡಿಯಲ್ಲಿ ಈ ಮಾತುಕತೆ ನಡೆದಿತ್ತು. ಸುಮಾರು ಎಂಟೂವರೆ ಗಂಟೆಗಳು ನಡೆದ ಸಭೆ ಅಂತಿಮವಾಗಿ ವಿಫಲವಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ