NEWSನಮ್ಮರಾಜ್ಯರಾಜಕೀಯ

ಗಡಿ ರಾಜ್ಯಗಳಲ್ಲಿ ಬಿಎಸ್ಎಫ್ ಅಧಿಕಾರ ವ್ಯಾಪ್ತಿ ಹೆಚ್ಚಳ: ಇದು ಸರ್ವಾಧಿಕಾರ ಎಂದ ಆಪ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಂಜಾಬ್ ಸೇರಿದಂತೆ ಇತರ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಿದ ಕೇಂದ್ರದ ಕ್ರಮವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ವಿರೋಧಿಸಿದ್ದು , ಇದೊಂದು ಸರ್ವಾಧಿಕಾರದಧೋರಣೆ ಎಂದಿದೆ.

ನೀವು (ಕೇಂದ್ರ ಸರ್ಕಾರ) ಬಿಎಸ್ಎಫ್ ಪಡೆಯ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವ ಮೂಲಕ ರಾಜ್ಯ ಪೊಲೀಸರ ಅಧಿಕಾರ ವ್ಯಾ ಪ್ತಿಯನ್ನು ಕಡಿಮೆಗೊಳಿಸಿದ್ದೀ ರಿ. ಇದೊಂದು ರೀತಿಯ ದಾದಾಗಿರಿ ಮತ್ತು ಸರ್ವಾಧಿಕಾರ.

ಇದನ್ನು ಯಾವುದೇ ಪಕ್ಷ ಅಥವಾಯಾವುದೇ ರಾಜ್ಯ ಸರ್ಕಾರ ಮತ್ತು ರಾಜ್ಯದ ಜನತೆ ಇಷ್ಟ ಪಡುವುದಿಲ್ಲ ಎಂದು ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಗಡಿ ಹೊಂದಿರುವ ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ 15 ಕಿ.ಮೀ.ಯಷ್ಟಿ ದ್ದ ಬಿಎಸ್ಎಫ್ ಅಧಿಕಾರ ವ್ಯಾಪ್ತಿಯನ್ನು 50 ಕಿ.ಮೀ.ಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಬಿಎಸ್ಎಫ್ ಕಾಯ್ದೆಯನ್ನು ಇತ್ತೀಚೆಗೆ ತಿದ್ದು ಪಡಿಮಾಡಿದೆ.

ಎಲ್ಲ ರಾಜ್ಯಗಳ ಸಹಯೋಗದೊಂದಿಗೆ ಈ ನಿರ್ಧಾರವನ್ನು ಕೇಂದ್ರ ಕೈಗೊಂಡಿದ್ದರೆ ಎಲ್ಲರೂ ಸ್ವಾಗತಿಸುತ್ತಿದ್ದರು. ಕೇಂದ್ರವು ರಾಜ್ಯಗಳ ಸಹಯೋಗದೊಂದಿಗೆ ಕೆಲಸಮಾಡಬೇಕು. ರ್ವಾಧಿಕಾರಿತನವನ್ನು
ನಾವು ಪುರಸ್ಕರಿಸುವುದಿಲ್ಲ ಎಂದು ಸೌರಭ್ ಭಾರದ್ವಾಜ್ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ