CrimeNEWSದೇಶ-ವಿದೇಶ

ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ : ನಿವೃತ್ತ ಮುಖ್ಯ ಇಂಜಿನಿಯರ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಸಂಬಂಧ ನಿವೃತ್ತ ಮುಖ್ಯ ಇಂಜಿನಿಯರ್ ಒಬ್ಬರ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಹೇಮಾವತಿ ಯೋಜನೆಯಲ್ಲಿ 2008ರಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಮುಖ್ಯ ಇಂಜಿನಿಯರ್ ಎಸ್.ಸಿ. ಜಯಚಂದ್ರ ವಿರುದ್ಧ ಸಮನ್ಸ್ ಜಾರಿಮಾಡಿರುವ ಪ್ರ ಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆಯೂ ನ್ಯಾಯಮೂರ್ತಿಗಳಾದ ಆರ್.ಸುಭಾಷ ರೆಡ್ಡಿ ಹಾಗೂ ಹೃಷಿಕೇಶ ರಾಯ್ಅವರಿದ್ದ ದ್ವಿಸದಸ್ಯ ಪೀಠ ಕರ್ನಾಟಕ ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.

ಅರ್ಜಿದಾರರು ಸೇವೆ ಸಲ್ಲಿಸುವ ಇಲಾಖೆಯ ಅಧಿಕಾರಿಯು ವಿಚಾರಣೆ ನಡೆಸಲು ಸ್ವತಂತ್ರವಾಗಿ ಅನುಮತಿ ನೀಡಿಲ್ಲ . ಬದಲಿಗೆ, ತನಿಖಾಧಿಕಾರಿಯ ಆದೇಶದಂತೆ ವಿಚಾರಣೆ ನಡೆಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದ್ದಾಗಿ ಅರ್ಜಿದಾರರ ಪರ ವಕೀಲರಾದ ದೇವದತ್ತ ಕಾಮತ್ ಹಾಗೂ ನಿಶಾಂತ್ ಪಾಟೀಲ ವಾದ ಮಂಡಿಸಿದರು.

ಅರ್ಜಿದಾರರ ವಿರುದ್ಧ ಮೊದಲು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದುಗೊಳಿಸಲಾಗಿದ್ದು, ಅನುಮತಿ ರಹಿತವಾಗಿ ಹೊಸದಾಗಿ ವಿಚಾರಣೆ ನಡೆಸಲಾಗದು ಎಂದೂ ಅವರು ಹೇಳಿದರು.

ಅರ್ಜಿದಾರರ ಕುಟುಂಬವು, ಅವರ ಉದ್ಯೋ ಗದಹೊರತಾಗಿಯೂವಿವಿಧ ಆದಾಯದಮೂಲಗಳನ್ನು ಹೊಂದಿದೆ. ಪತ್ನಿಯ ಆದಾಯಮೂಲಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದರೂ ಅದನ್ನು ಪರಿಗಣಿಸುವಲ್ಲಿ ಹೈಕೋರ್ಟ್ ವಿಫಲವಾಗಿದೆ ಎಂದು ಹೇಳಿದರು.

ಲೋಕಾಯುಕ್ತ ಪೊಲೀಸರು ಅರ್ಜಿದಾರರ ವಿರುದ್ಧ 2008ರಲ್ಲಿ ಭ್ರಷ್ಟಾ ಚಾರ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದ ರಾದರೂ, 10 ವರ್ಷಗಳ ನಂತರ 2018ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

2019ರಮಾರ್ಚ್ 20ರಂದುಹೊಸದಾಗಿ ನೀಡಲಾದ ಅನುಮತಿಯ ಆಧಾರದಲ್ಲಿ ಅಧೀನ ನ್ಯಾಯಾಲಯವು ಸಮನ್ಸ್ ಜಾರಿಮಾಡಿ ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ 2020ರಮೇ 18ರಂದು ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...