NEWSನಮ್ಮಜಿಲ್ಲೆರಾಜಕೀಯ

ಸಿಎಂ ಇಬ್ರಾಹಿಂ ಕೇವಲ ಭಾಷಣಕಾರನಾಗಿ ಕಾಂಗ್ರೆಸ್‌ನಲ್ಲಿದ್ದರು: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಸಿಎಂ ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷ ಕೇವಲ ಭಾಷಣಕ್ಕಾಗಿ ಇರಿಸಿಕೊಂಡಿದೆ. ಭಾಷಣದ ಮೂಲಕ ಜನರನ್ನು ಆಕರ್ಷಣೆಯನ್ನು ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಅವರನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಶನಿವಾರ ಚನ್ನಪಟ್ಟಣದ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೆರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ತಮಗೆ ಆದಂತಹ ಅನುಭವದಲ್ಲಿ ಹೇಳಿಕೆಯನ್ನು ನೀಡಿದ್ದಾರೆ.

ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಕಾಂಗ್ರೆಸ್ ತೊರೆದು ಬಂದ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ದೇವೆಗೌಡರು ಪ್ರಧಾನಿಯಾದಾಗ ಸಿ.ಎಂ. ಇಬ್ರಾಹಿಂರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ಎರಡು ಖಾತೆಗಳನ್ನು ನೀಡಲಾಗಿತ್ತು. ನಾವು ಯಾವತ್ತೂ ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಹಾಕುವುದು ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದಕ್ಕೆ ಅಂತ ಪದೇಪದೇ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತಾ ಕಾಂಗ್ರೆಸ್ ನಾಯಕರ ಪ್ರಚಾರ ಮಾಡಿದ್ದರು ಎಂದು ಕಿಡಿಕಾರಿದರು.

2013ರ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. ಇಕ್ಬಾಲ್ ಸರಡಗಿಯನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಕಾಂಗ್ರೆಸ್ ಪಕ್ಷದಿಂದಲೇ ಅಧಿಕೃತವಾಗಿ ಸ್ಪರ್ಧೆ ಮಾಡಿದಂತ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರ ಏನು? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊಟ್ಟಂತಹ ಒಂದು ಹೇಳಿಕೆಯನ್ನೇ ಆಧರಿಸಿ ರೋಷನ್ ಬೇಗ್‌ಗೆ ನೋಟಿಸ್ ನೀಡದೆ 6 ವರ್ಷ ಸಸ್ಪೆಂಡ್ ಮಾಡಿ ಬಿಟ್ಟರು. ಜಾಫರ್ ಶರೀಫ್‌ರವರ ಮೊಮ್ಮಗನನ್ನು ಚುನಾವಣೆಗೆ ನಿಲ್ಲಿಸಿ, ಆತನ ಸೋಲಿನಲ್ಲಿ ಯಾರು ಕಾರಣರಾಗಿದ್ದರು. ಸಿದ್ದರಾಮಯ್ಯನವರ ಪಾತ್ರ ಏನಿತ್ತು? ಇವರ ಹಿಂಬಾಲಕರ ಪಾತ್ರ ಏನಿತ್ತು?  ಎಂದು ನೇರವಾಗಿ ಪ್ರಶ್ನಿಸಿದರು.

ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಾಗ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬಗ್ಗೆ ಯಾವ ರೀತಿ ಪದ ಬಳಕೆಯನ್ನು ಮಾಡಿದ್ದರು ಅನ್ನುವುದನ್ನು ಹೇಳಬೇಕಾ? ವಿಧಾನಸೌಧದ ಮುಂದೆ ಸಿದ್ದರಾಮಯ್ಯನವರ ಭಾಷಣ ಮಾಡಿದಾಗ ರೋಷನ್ ಬೇಗ್ ಬಗ್ಗೆ ಏನೆಲ್ಲ ಪದಬಳಕೆ ಮಾಡಿದ್ದರು ಎಂಬುದು ಗೊತ್ತಿದೆ ಎಂದರು.

ಸಲೀಂ ವಿಚಾರದಲ್ಲಿ ಸಿದ್ದರಾಮಯ್ಯನವರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಿದ್ದಾರೆ. ನಮ್ಮ ನಾಯಕರು, ನಮ್ಮ ಗುರುಗಳು, ನಮ್ಮ ಗಾಡ್‌ ಫಾದರ್ ಅಂತೇಳಿ ಸಲೀಂ ಹೇಳುತ್ತಿದರು. ಈಗ ಆತನನ್ನು ಆರು ವರ್ಷ ಅಮಾನತು ಮಾಡಿದ್ದಾರೆ.

ಆರು ಬಾರಿ ಸಂಸದರಾಗಿದ್ದ ಕೋಲಾರದ ಮುನಿಯಪ್ಪ ಅವರ ಸೋಲಿಗೂ ಕೂಡ ಸಿದ್ದರಾಮಯ್ಯನವರ ಹಿಂದೆ ಮುಂದೆ ಇದ್ದ ನಾಯಕರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದರು.

ಅಲ್ಪಸಂಖ್ಯಾತ ಹಾಗೂ ದಲಿತ ಮುಖಂಡರುಗಳಿಗೆ ಕಾಂಗ್ರೆಸ್ ಏನು ಗೌರವ ನೀಡಿದೆ. ಈಗ ಒಬಿಸಿ ಹೆಸರಿನಲ್ಲಿ ಸಮಾವೇಶವನ್ನು ಮಾಡಲಿಕ್ಕೆ ಸಿದ್ದರಾಮಯ್ಯನವರು ಹೊರಟಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಿರಲಿ, ನಿಮ್ಮ ಕಣ್ಣ ಮುಂದೆ ನಡೆದ ಘಟನೆಗಳ ಬಗ್ಗೆ ಸಿದ್ದರಾಮಯ್ಯನವರೇ ಉತ್ತರ ಕೊಡಿ ಎಂದು ಕೇಳಿದರು.

ನಾನು ಪದ ಬಳಕೆಯಲ್ಲಿ ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಿ ಮಾತನಾಡಿಲ್ಲ. ರಾಜಕೀಯದ ನರಮೇಧ ಅಂತ ಹೇಳಿದ್ದೇನೆ ಹೊರತು ಸಿದ್ದರಾಮಯ್ಯನವರ ನರಮೇಧ ಅಂತ ಹೇಳಿಲ್ಲ.

ಅಲ್ಪಸಂಖ್ಯಾತ ನಾಯಕರ ನರಮೇಧ ಹೇಗೆ ನಡೆಯಿತು ಅಂತ ಹೇಳಿದ್ದೇನೆ. ನಾನು ಯಾರ ಬಗ್ಗೆಯೂ ಲಘುವಾಗಿ ಪದ ಬಳಕೆಗಳನ್ನು ಮಾಡಿಲ್ಲ,” ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಮಜಾಯಿಷಿ ನೀಡಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...