NEWSನಮ್ಮಜಿಲ್ಲೆರಾಜಕೀಯ

ರಾಜ್ಯ, ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ವೃದ್ಧಿಯಾಗುತ್ತಿದೆ ಎಎಪಿ ಕಾರ್ಯಕರ್ತರ ಪಡೆ

ಸಂಪಂಗಿರಾಮನಗರದಲ್ಲಿ ಎಎಪಿ ಕಚೇರಿ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ಎಲ್ಲೆಡೆಯೂ ಬೇರೂರುತ್ತಿರುವ ಆಮ್‌ ಆದ್ಮಿ ಪಾರ್ಟಿಯು ಇಂದು ಸಂಪಂಗಿರಾಮನಗರದಲ್ಲಿ ಕಚೇರಿಯನ್ನು ಲೋಕಾರ್ಪಣೆ ಮಾಡಿದೆ.

ಈ ಮೂಲಕ ನಗರದಲ್ಲಿ ಮತ್ತೊಂದು ಕಚೇರಿಯನ್ನು ತೆರೆದು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಿದೆ.

ಇನ್ನು ಭಾನುವಾರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, “ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.

ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್‌ಗಳಲ್ಲಿ ಪ್ರಥಮ ಹಂತದ ಬೂತ್‌ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ ಜಯಗಳಿಸುವುದು ನಿಶ್ಚಿತವಾಗಿದ್ದು, ಎಎಪಿಯ ಆಡಳಿತದಿಂದ ಬೆಂಗಳೂರಿಗೆ ಹೊಸ ರೂಪ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಬೆಂಗಳೂರಿನ ಜನತೆ ತುಂಬ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬೆಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಭ್ರಷ್ಟ ಆಡಳಿತದ ಬದಲು ಕೇಜ್ರಿವಾಲ್‌ ಮಾದರಿಯ ಸ್ವಚ್ಛ ಹಾಗೂ ಪಾರದರ್ಶಕ ಆಡಳಿತವನ್ನು ಬಯಸುತ್ತಿದ್ದಾರೆ ಎಂದರು.

ಇನ್ನು ವಿಶೇಷವಾಗಿ ಯುವಜನತೆಯು ದೊಡ್ಡ ಪ್ರಮಾಣದಲ್ಲಿ ಎಎಪಿಯತ್ತ ಆಕರ್ಷಿತರಾಗುತ್ತಿರುವುದು ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್‌ ಕುಮಾರ್‌, ಎಎಪಿಯ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ, ಮಾಜಿ ಶಾಸಕ ಎಚ್‌.ಡಿ. ಬಸವರಾಜು, ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ, ನಗರದ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿ, ಸಂಪಂಗಿರಾಮನಗರ ವಾರ್ಡ್‌ ಅಧ್ಯಕ್ಷ ಹಾಗೂ ಪಕ್ಷದ ನೀತಿ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರಕಾಶ್‌ ನೆಡಂಗಾಡಿ, ಮುಖಂಡರಾದ ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌ ಮತ್ತಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ