NEWSನಮ್ಮರಾಜ್ಯರಾಜಕೀಯ

ಪೊಲೀಸರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ ಸಿಎಂ: ಸಿದ್ದರಾಮಯ್ಯ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕೇಸರಿ ಶಾಲು, ಬಿಳಿ ಟೋಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿರವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳ ಸಹ ನಡೆಯುತ್ತಿವೆ.

ಈ ವಿಚಾರವಾಗಿ ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿಕಾರಿದ್ದು, “ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದ್ದೀರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ?

ಮುಖ್ಯಮಂತ್ರಿಗಳ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್​ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಬಸವರಾಜ ಬೊಮ್ಮಾಯಿ ಅವರೇ. ಸಂವಿಧಾನ ಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ