ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಎಚ್‌ಆರ್ ಬಡಾವಣೆಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದರು. ಬಡಾವಣೆಯಲ್ಲಿ ಮಳೆಯಿಂದ ಸಂಭವಿಸುತ್ತಿರುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಸ್ಥಳೀಯ ಶಾಸಕ ಸತೀಶ್ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ಜಲಮಂಡಳಿ ಅಧ್ಯಕ್ಷ ಜಯರಾಮ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.