NEWSದೇಶ-ವಿದೇಶನಮ್ಮರಾಜ್ಯ

ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ ‘ರೈಲ್ ತಡೆ’ ಹೋರಾಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಂಡೀಗಡ: ಪಂಜಾಬ್‌ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ ‘ರೈಲ್ ರೋಕೊ’ (ರೈಲು ತಡೆ) ಪ್ರ ತಿಭಟನೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ಮೋರ್ಚಾದ ಸದಸ್ಯ ರು ಒತ್ತಾಯಿಸಿದ್ದಾರೆ.

ಫಿರೋಜ್ಪುರ್ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫಿರೋಜ್ಪುರ್–ಫಜಿಲ್ಕಾ ಹಾಗೂ ಫಿರೋಜ್ಪುರ್–ಲೂಧಿಯಾನಾ
ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೇಂದ್ರ ಸಚಿವ ಅಜಯ್‌ಮಿಶ್ರಾ ಅವರನ್ನು ಬಂಧಿಸುವಂತೆ ಕಿಸಾನ್ ಮಜದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಆಗ್ರಹಿಸಿದ್ದು, ರಾಜ್ಯ ದ 11 ಜಿಲ್ಲೆಗಳಲ್ಲಿ 20 ಕಡೆ ಸಮಿತಿಯು ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ಮೋರ್ಚಾ ರೈತ ಸಂಘಟನೆ ಒಕ್ಕೂಟವು, ‘ಲಖಿಂಪುರ ಖೇರಿ ಪ್ರ ಕರಣದಲ್ಲಿ ನ್ಯಾಯ ಸಿಗುವ ವರೆಗೂ ಹೋರಾಟದ ತೀವ್ರತೆ ಹೆಚ್ಚಿಸಲಾಗುತ್ತದೆ’ ಎಂದು ಹೇಳಿದೆ.

ಬೆಳಗ್ಗೆ 10ರಿಂದ ಸಂಜೆ ನಾಲ್ಕ ರವರೆಗೂ ಎಲ್ಲ ರೈಲುಗಳ ಸಂಚಾರವನ್ನು ತಡೆಯಲು ರೈತ ಸಂಘಟನೆಗಳು ಕರೆ ನೀಡಿವೆ. ರೈಲ್ವೆ ಆಸ್ತಿಗೆಯಾವುದೇ ಹಾನಿಯಾಗದಂತೆ ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸುವಂತೆ ಪ್ರತಿಭಟನಾಕಾರರಿಗೆ ಸಂಯುಕ್ತ ಕಿಸಾನ್ಮೋರ್ಚಾ ತಿಳಿಸಿದೆ.

ಅಕ್ಟೋ ಬರ್ 3ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ 8 ಜನರ ಪೈಕಿ ನಾಲ್ವ ರು ರೈತರು. ಬಿಜೆಪಿ ಕಾರ್ಯಕರ್ತರಿದ್ದ ವಾಹನಗಳು ರೈತರ ಮೇಲೆ ಹರಿದು ನಾಲ್ವ ರು ರೈತರು ಸಾವಿಗೀಡಾದರು. ಅನಂತರ ಆಕ್ರೋ ಶಗೊಂಡ ಪ್ರ ತಿಭಟನಾಕಾರರು ವಾಹನದಲ್ಲಿದ್ದ ವರಮೇಲೆ ಹಲ್ಲೆ ಮಾಡಿದರು.

ಆ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಅವರ ವಾಹನ ಚಾಲಕ ಮೃತಪಟ್ಟರು. ರೈತರ ಮೇಲೆ ನುಗ್ಗಿ ದ ವಾಹನಗಳ ಪೈಕಿ ಒಂದರಲ್ಲಿ ಸಚಿವ ಅಜಯ್ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಸಹ ಇದ್ದರು ಎಂದು ರೈತರು ಆರೋಪಿಸಿದ್ದಾರೆ.

ರೈತರ ಸಾವಿನ ಪ್ರಕರಣದ ಸಂಬಂಧ ಅಕ್ಟೋ ಬರ್ 9ರಂದು ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ