NEWSನಮ್ಮರಾಜ್ಯರಾಜಕೀಯ

ಹೊಳೆನರಸೀಪುರ ಜನರಿಗೆ ರೇವಣ್ಣ ಶಾಸಕರಾದ ಬಳಿಕ ವೈಯಕ್ತಿಕ ಸ್ವಾತಂತ್ರ್ಯವೇ ಇಲ್ಲ: ಬಾಗೂರು ಮಂಜೇಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯ ಜನ ಜೆಡಿಎಸ್‍ನಿಂದ ಸ್ವಾತಂತ್ರ್ಯ ಪಡೆಯಬೇಕಿದ್ದು, ಅದರಲ್ಲೂ ಹೊಳೆನರಸೀಪುರ ಕ್ಷೇತ್ರದ ಜನರಿಗೆ ಎಚ್.ಡಿ ರೇವಣ್ಣ ಶಾಸಕರಾದ ಬಳಿಕ ವೈಯಕ್ತಿಕ ಸ್ವಾತಂತ್ರ್ಯವೇ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಕಿಡಿಕಾರಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ, ಎಚ್‍ಡಿಕೆ ಹೇಳಿಕೆ ವಿರೋಧಿಸಿ, ನಾನು ರೇವಣ್ಣ ವಿರುದ್ಧ ಸ್ಪರ್ಧೆ ಮಾಡಿದ್ದರಿಂದ ಇದನ್ನು ಹೇಳುತ್ತಿದ್ದೇನೆ. ಅಲ್ಲಿಯ ಜನ ಹೆದರಿಕೊಂಡಿರೋದು ನಿಜ ಎಂದು ಹೇಳಿದರು.

ಈ ಹಿಂದೆ ಆ ಕ್ಷೇತ್ರದ ಸಚಿವರಾಗಿದ್ದ ಎಂ.ಬಿ.ಪಾಟೀಲ್ ಬಳಿ ಹೋಗಿದ್ದೇವು. ರೇವಣ್ಣ ವಿರುದ್ಧ ಯಾರು ಮಾತನಾಡುತ್ತಾರೆ ಅವರ ಮೇಲೆ ರೌಡಿಶೀಟರ್ ಕೇಸ್ ಹಾಕಿಸುತ್ತಿದ್ದಾರೆ ಅದನ್ನು ತಪ್ಪಿಸಿ ಎಂದು ಮನವಿ ಮಾಡಿಕೊಂಡಿದ್ದೇವು. ಆಗ ಎಂ.ಬಿ.ಪಾಟೀಲ್ ಎಸ್‍ಪಿಗೆ ಫೋನ್ ಮಾಡಿ ಆ ರೀತಿ ಮಾಡಬೇಡಿ ಎಂದಿದ್ದರು ಆದರೂ ಪ್ರಯೋಜನ ಆಗಲಿಲ್ಲ ಎಂದು ಆರೋಪಿಸಿದ್ದಾರೆ.

ಹೊಳೆನರಸೀಪುರದಲ್ಲಿ ಮುಕ್ತ ಚುನಾವಣೆ ನಡೆಯಲ್ಲ. ಇದನ್ನು ನಾನು ಅಭ್ಯರ್ಥಿಯಾಗಿದ್ದಾಗ ಅನುಭವಿಸಿದ್ದೇನೆ. ಸುಮಾರು 70 ಹಳ್ಳಿಗಳಲ್ಲಿ ಯಾವ ಪೊಲೀಸರು ಬರಲ್ಲ. ಈ ಬಗ್ಗೆ ಯಾವ ಎಲೆಕ್ಷನ್ ಕಮಿಟಿಗೆ ದೂರು ಕೊಟ್ಟರೂ ಏನು ಆಗಲ್ಲ.

ಜೆಡಿಎಸ್ ಪಕ್ಷದವರು ಜನ ಯಾರಿಗೆ ಓಟ್ ಹಾಕ್ತಾರೆ ಎಂದು ಬೂತ್ ಬಳಿ ನಿಂತು ನೋಡುತ್ತಾರೆ. ಹೀಗಾಗಿ ಜನ ತಮಗೆ ಬೇಕಾದವರಿಗೆ ಓಟ್ ಹಾಕಲು ಹೆದರುತ್ತಾರೆ. ಈ ಪರಿಸ್ಥಿತಿ ಸರಿಯಾಗಬೇಕಾದರೆ ನಮ್ಮ ಕಾಂಗ್ರೆಸ್ ರಾಜ್ಯ ನಾಯಕರು ಜಿಲ್ಲೆಯಲ್ಲಿ ಪ್ರವಾಸ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ರೇವಣ್ಣ ವಿರುದ್ಧ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಬಾಗೂರು ಮಂಜೇಗೌಡ ಸೋಲನುಭವಿಸಿದ್ದರು. ಆ ಬಳಿಕ ಇದೀಗ ರೇವಣ್ಣ ವಿರುದ್ಧ ಆರೋಪ ಮಾಡುತ್ತಿದ್ದಾರೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ