NEWSನಮ್ಮರಾಜ್ಯರಾಜಕೀಯ

ಗುಂಡಿಗಳಿಗೆ ಅಲಂಕಾರ, ಪೂಜೆ: ಎಎಪಿಯಿಂದ ವಿನೂತನ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆಗಳಲ್ಲಿರುವ ಗುಂಡಿಯ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ. ಅದರ ಸುತ್ತಮುತ್ತ ಸರ್ಕಾರದ ವಿರುದ್ಧ ಬರಹಗಳಿರುವ ಬೋರ್ಡ್‌ ಹಿಡಿದು ನಿಂತಿರುವ ಬಿಳಿ ಟೋಪಿಧಾರಿಗಳು. ಅವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ಧ ಆಕ್ರೋಶದ ಘೋಷಣೆಗಳು.

ಇದು ಆಮ್‌ ಆದ್ಮಿ ಪಾರ್ಟಿಯು ಬುಧವಾರ ಬೆಂಗಳೂರಿನಾದ್ಯಂತ ಹಮ್ಮಿಕೊಂಡಿದ್ದ ರಸ್ತೆಗುಂಡಿ ಹಬ್ಬ ಕಾರ್ಯಕ್ರಮದಲ್ಲಿ ಕಂಡುಬಂದ ದೃಶ್ಯ. ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಅಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿನೂತನ ಪ್ರತಿಭಟನೆ ಯಶಸ್ವಿಯಾಯಿತು.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಎಎಪಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,060 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಖರ್ಚು ಮಾಡಿದೆ. ಆದರೆ ಇಲ್ಲಿನ ರಸ್ತೆಗಳು ಮಾತ್ರ ಶೋಚನೀಯ ಸ್ಥಿತಿಯಲ್ಲಿವೆ.

ಗುಂಡಿಗಳಿಂದಾಗಿ ಅಪಘಾತಗಳು, ಸಾವುಗಳು ಸಾಮಾನ್ಯವಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಹಣವು ಯಾರ ಜೇಬು ಸೇರಿದೆ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ರಸ್ತೆ ಅಭಿವೃದ್ಧಿ ಯೋಜನೆಗಳ ಅನುದಾನದ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಎಎಪಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಾಹನ ಸವಾರರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಒಂದೆಡೆ, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಹೆಚ್ಚಿಸಿ ವಾಹನ ಸವಾರರನ್ನು ಹೈರಾಣಾಗಿಸಿದೆ.

ಮತ್ತೊಂದೆಡೆ, ರಸ್ತೆಗಳಿಗೆ ವಿನಿಯೋಗವಾಗಬೇಕಿದ್ದ ಹಣವನ್ನು ಜೇಬಿಗೆ ಇಳಿಸಿಕೊಂಡು ಶಾಸಕರು ಹಾಗೂ ಸಚಿವರು ಗುಂಡಿಗಳಿಗೆ ಕಾರಣವಾಗಿದ್ದಾರೆ. ಕಾಟಾಚಾರಕ್ಕೆ ಗುಂಡಿಗಳಿಗೆ ತೇಪೆ ಹಾಕಲಾಗುತ್ತಿದ್ದು, ಸಣ್ಣ ಮಳೆಗೂ ಅವು ಕಿತ್ತು ಹೋಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯನಗರ ಕ್ಷೇತ್ರದಲ್ಲಿ ಅರ್ಚನಾ, ಚಾಮರಾಜಪೇಟೆ ಕ್ಷೇತ್ರದಲ್ಲಿ ಜಗದೀಶ್‌ ಚಂದ್ರ, ಚಿಕ್ಕಪೇಟೆ ಕ್ಷೇತ್ರದಲ್ಲಿ ಪ್ರಕಾಶ್‌ ನಾಗರಾಜ್‌, ಗಾಂಧಿನಗರ ಕ್ಷೇತ್ರದಲ್ಲಿ ರಾಜಶೇಖರ್‌ ದೊಡ್ಡಣ್ಣ, ಗೋಪಿನಾಥ್, ಉಷಾ ಮೋಹನ್‌, ಯಲಹಂಕ ಕ್ಷೇತ್ರದಲ್ಲಿ ಸುಹಾಸಿನಿ ಫಣಿರಾಜ್‌, ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಪಲ್ಲವಿ ಚಿದಂಬರಂ, ಸಿ.ವಿ ರಾಮನ್‌ ಕ್ಷೇತ್ರದಲ್ಲಿ ಪ್ರಶಾಂತಿ.

ಪುಲಿಕೇಶಿನಗರ ಕ್ಷೇತ್ರದಲ್ಲಿ ಸಶಾವಲ್ಲಿ, ಮೊಹಮ್ಮದ್‌ ಅಸದ್‌, ಮಹದೇವಪುರ ಕ್ಷೇತ್ರದಲ್ಲಿ ಅಶೋಕ್‌ ಮೃತ್ಯುಂಜಯ ಹಾಗೂ ಮುಖಂಡರಾದ ಜಗದೀಶ್‌ ಬಾಬು, ಆನಂದ್‌ ವಾಸುದೇವನ್‌, ರಾಜ್ಯ ಯುವ ಘಟಕದ ಅಧ್ಯಕ್ಷ ಮುಕುಂದ್‌ ಗೌಡ, ಬೆಂಗಳೂರು ಆಟೋ ಚಾಲಕರ ಘಟಕದ ಉಸ್ಮಾನ್‌ ಹಾಗೂ ಇನ್ನಿತರೆ ಮುಖಂಡರ ನೇತೃತ್ವದಲ್ಲಿ ರಸ್ತೆಗುಂಡಿ ಹಬ್ಬ ನೆರವೇರಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...