NEWSಸಿನಿಪಥ

ಪವರ್ ಸ್ಟಾರ್ ಪುನೀತ್‌ ಜೊತೆ ಪೋಸ್‌ಕೊಟ್ಟ ವಿದೇಶಿ ಹುಡುಗೀರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಈ ಮಧ್ಯೆ ಚಿತ್ರೀಕರಣದ ವೇಳೆ ಪುನೀತ್ ಜೊತೆ ವಿದೇಶಿ ಹುಡುಗಿಯರು ಫೋಟೋ ಕ್ಲಿಕ್ಕಿಸಿ ಪೋಸ್‌ಕೊಡುತ್ತಿದ್ದಾರೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಿದ್ದ ಬಹದ್ದೂರ್, ಭರ್ಜರಿ ಹಾಗೂ ನಟ ಶ್ರೀ ಮುರಳಿ ಅಭಿನಯಿಸಿದ್ದ ಭರಾಟೆ ಸಿನಿಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ, ನಿರ್ದೇಶಕ ಚೇತನ್ ಕುಮಾರ್ ಜೇಮ್ಸ್ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಪುನೀತ್‍ ರಾಜ್‌ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಜೇಮ್ಸ್ ​ಒಂದು ಆ್ಯಕ್ಷನ್ ಕಮರ್ಷಿಯಲ್ ಸಿನಿಮಾವಾಗಿದ್ದು, ಈಗಾಗಲೇ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಸದ್ಯ ಚಿತ್ರೀಕರಣದ ನಡುವೆ ಪುನೀತ್ ಜೊತೆ ಇಬ್ಬರು ವಿದೇಶಿ ಹುಡುಗಿಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಫೋಟೋದಲ್ಲಿ ಇಬ್ಬರು ಹುಡುಗೀರು ಗ್ರೇ ಕಲರ್ ಶಾರ್ಟ್ ಟಾಪ್, ಬ್ಲಾಕ್ ಕಲರ್ ಪ್ಯಾಂಟ್ ಹಾಗೂ ಬ್ಲಾಕ್ ಕಲರ್ ಜಾಕೆಟ್ ತೊಟ್ಟು, ಕೈಯಲ್ಲಿ ಗನ್ ಹಿಡಿದುಕೊಂಡು ಪುನೀತ್ ಅಕ್ಕಪಕ್ಕ ನಿಂತು ಪೋಸ್ ಕೊಡತ್ತಿರುವುದನ್ನು ಕಾಣಬಹುದು.

ಈ ಫೋಟೋ ನೋಡುತ್ತಿದ್ದರೆ, ಬಹುಶಃ ಇದು ಫೈಟಿಂಗ್ ಅಥವಾ ಹಾಡಿನ ಚಿತ್ರೀಕರಣದ ವೇಳೆ ಸೆರೆಹಿಡಿದಿರುವಂತೆ ಕಾಣಿಸುತ್ತದೆ. ಒಟ್ಟಾರೆ ಈ ಫೋಟೋ ನೋಡಿ ಅಭಿಮಾನಿಗಳು ಥ್ರೀಲ್ ಆಗಿದ್ದು, ಸಿನಿಮಾದ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗುತ್ತಿದೆ.

ಈ ಸಿನಿಮಾದಲ್ಲಿ ಪುನೀತ್‍ಗೆ ಜೋಡಿಯಾಗಿ ಕಾಲಿವುಡ್ ನಟಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದು, ಚೇತನ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿರುವ ನಾಲ್ಕನೇ ಸಿನಿಮಾವಾಗಿದೆ. ಚಿತ್ರಕ್ಕೆ ಎ. ಹರ್ಷ ನೃತ್ಯ ನಿರ್ದೇಶಿಸಲಿದ್ದು, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿಗಳನ್ನು ನಿರ್ದೇಶಿಸಲಿದ್ದಾರೆ ಹಾಗೂ ನಿರ್ಮಾಪಕ ಕಿಶೋರ್ ಪತಿಕೊಂಡ ಬಂಡವಾಳ ಹೂಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...