ಮೈಸೂರು: ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಅಂದರೆ “ಸುಸ್ವಾಗತ”ವಿದ್ಯುತ್ ಬೋರ್ಡ್ ಹಾಕಿರುವ ಸಮೀಪ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿದೆ.
ಧಾರಾಕಾರ ಮಳೆಯಿಂದಾಗಿ ಭೂಕುಸಿತ ವಾಗಿದ್ದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಯಾರು ಸಹ ಈ ರಸ್ತೆಯಲ್ಲಿ ಸಂಚರಿಸಬಾರದೆಂದು, ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಈ ನಡುವೆ ಚಾಮುಂಡಿಬೆಟ್ಟ ಭೂಕುಸಿತದ ದುರಸ್ತಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದ್ದು, ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ತಿಳಿಸಿದ್ದಾರೆ.
ʻಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ.
ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ ಎಂದು ತಿಳಿಸಿದ್ದಾರೆ.