NEWSನಮ್ಮಜಿಲ್ಲೆರಾಜಕೀಯ

ಹಾನಗಲ್ ಉಪಚುನಾವಣೆ: ಮತದಾನ ಪೂರ್ವ 48 ಗಂಟೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ

ಕ್ಷೇತ್ರದ ಹೊರಗಿನವರು ಅ.28ರ ಸಂಜೆಯಿಂದ ಹೊರನಡೆಯಲು ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಸುಗಮ ಹಾಗೂ ಮುಕ್ತ ಚುನಾವಣೆ ಹಿತದೃಷ್ಟಿಯಿಂದ ಸಿಆರ್‌ಪಿಸಿ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 28ರ ಸಾಯಂಕಾಲ 7 ಗಂಟೆಯಿಂದ ಅಕ್ಟೋಬರ್ 30ರ ಮಧ್ಯರಾತ್ರಿವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

82-ಹಾನಗಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರದ ಸಲುವಾಗಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು ನಿಷೇಧಿಸಲಾಗಿದೆ.

ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾಡ್ರ್ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಒಯುವುದನ್ನು ನಿಷೇಧಿಸಲಾಗಿದೆ (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ ಸಿಬ್ಬಂದಿ ಹೊರತುಪಡಿಸಿ).

ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

ಬಹಿರಂಗ ಪುಚಾರ ಅ.28 ಸಂಜೆ 7 ಗಂಟೆಗೆ ಕೊನೆಗೊಳ್ಳುತ್ತಿದ್ದು, ಈ ಅವಧಿಯ ನಂತರ 82-ಹಾನಗಲ್ಲ ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೊರಗಡೆಹೋಗಬೇಕು.

ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲುಗಳು ಮತ್ತು ಅತಿಥಿ ಗ್ರಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಲಾಗುವುದು. ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಪೊಲೀಸ್ ಇಲಾಖೆ ಕ್ರಮವಹಿಸಲಿದೆ.

82-ಹಾನಗಲ್ಲ ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶಗಳಲ್ಲಿ ಇರುವ ಚೆಕ್ ಪೋಸ್ಟ್‌ಗಳಲ್ಲಿ ಮತಕ್ಷೇತ್ರದ ಹೊರಗಿನಿಂದ ಬರುವ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲು ಸೂಚನೆ ನೀಡಲಾಗಿದೆ.

ಈ ಆದೇಶವು ಬಾಗಿಲಿನಿಂದ ಬಾಗಿಲಿಗೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಅಭ್ಯರ್ಥಿ ಭೇಟಿ ನೀಡಿ ಪ್ರಚಾರ ಮಾಡುವುದಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...