NEWSದೇಶ-ವಿದೇಶರಾಜಕೀಯ

ಜನರಿಗೆ ಕಷ್ಟ ಕೊಡುವುದರಲ್ಲಿ ದಾಖಲೆ ಸೃಷ್ಟಿಸಿದ ಮೋದಿ ಸರ್ಕಾರ : ಪ್ರಿಯಾಂಕಾ ಗಾಂಧಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪೆಟ್ರೋ ಲ್ ಮತ್ತು ಡೀಸೆಲ್ ದರವನ್ನು ಏರಿಸುತ್ತಲೇ ಇರುವ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರ ದಾಖಲೆ ನಿರ್ಮಿಸಿದೆ’ ಎಂದು ಕಿಡಿಕಾರಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಮೋದಿ ಸರ್ಕಾರ ಜನರಿಗೆ “ತೊಂದರೆ” ನೀಡುವಲ್ಲಿ ದಾಖಲೆಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.

ಟ್ವಿಟರ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿದ್ದು, ಈ ವರ್ಷ ಪೆಟ್ರೋಲ್ ಬೆಲೆ ದಾಖಲೆಯ 23.53 ರೂ.ಗಳಷ್ಟು ಹೆಚ್ಚಾಗಿದೆ. ಮೋದಿ ಜಿ ಸರ್ಕಾರವು ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅತಿ ಹೆಚ್ಚು ನಿರುದ್ಯೋಗ, ಸರ್ಕಾರಿ ಆಸ್ತಿ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸತತ ನಾಲ್ಕನೇ ದಿನವಾದ ಶನಿವಾರ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಮೇಲಿನ ದರವನ್ನು ಪ್ರತಿ ಲೀಟರ್‌ಗೆ 36 ರೂ. ಮತ್ತು ಡೀಸೆಲ್ ಮೇಲೆ 26.58 ರೂ.ಗೆ ಏರಿಕೆ ಮಾಡಲಾಗಿದೆ.

ಈ ಮೂಲಕ ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರದೊಡ್ಡ ದಾಖಲೆ ನಿರ್ಮಿಸಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ನಿರುದ್ಯೋಗ ಸೃಷ್ಟಿ ಯಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟಮಾಡಲಾಗುತ್ತಿದೆ. ಒಂದು ವರ್ಷದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪೆಟ್ರೋಲ್ ದರ ಏರಿಕೆಯಾಗಿದೆ’ ಎಂದು ಹಿಂದಿಯಲ್ಲಿ ಟ್ವೀಟ್‌ಮಾಡಿದ್ದಾರೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ “ಅಚ್ಛೇ ದಿನ್” (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...